ದೊಡ್ಡಬಳ್ಳಾಪುರ: ನಾಡ ಪ್ರಭು ಕೆಂಪೇಗೌಡರ 511 ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಈ ವೇಳೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ,ತಹಶಿಲ್ದಾರ್ ಟಿ.ಎಸ್.ಶಿವರಾಜ್,ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್,ಜಿಪಂ ಮಾಜಿ ಸದಸ್ಯ ಎ.ನರಸಿಂಹಯ್ಯ,ಮುಖಂಡರಾದ ರಂಗಪ್ಪ ಮತ್ತಿತರಿದ್ದರು.
ಇದೇ ವೇಳೆ ಪಿಎಲ್ಡಿ ಬ್ಯಾಂಕ್ ಕಚೇರಿಯಲ್ಲಿಯೂ ಸಹ ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು.ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್,ಜಿಪಂ ಮಾಜಿ ಸದಸ್ಯ ಎ.ನರಸಿಂಹಯ್ಯ,ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆಂಜಿನಪ್ಪ ಮತ್ತಿತರಿದ್ದರು