ದೊಡ್ಡಬಳ್ಳಾಪುರ: ನಾಡಪ್ರಭು ಕೆಂಪೇಗೌಡರ 511ನೇ ಜಯಂತಿಯ ಅಂಗವಾಗಿ ಅವರ 108 ಅಡಿ ಎತ್ತರದ ಪ್ರತಿಮೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಗೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಸಿದ್ದಗಂಗಾ ಮಠದ ಮಠಾಧೀಶರಾದ ಶ್ರೀ ಸಿದ್ಧಲಿಂಗಸ್ವಾಮಿ,ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಡಾ. ಸಿ ಎನ್ ಅಶ್ವತ್ಥ್ ನಾರಾಯಣ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,ಸಚಿವರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.