ದೊಡ್ಡಬಳ್ಳಾಪುರದ ವ್ಯಕ್ತಿಯ ಅಂತ್ಯ ಸಂಸ್ಕಾರದ ನಂತರ ಕರೊನಾ ಪಾಸಿಟಿವ್,ಅಂತ್ಯ ಸಂಸ್ಕಾರಕ್ಕೆ ತೆರಳಿದವರಿಗೆ ಢವ ಢವ

ದೊಡ್ಡಬಳ್ಳಾಪುರ: ನಗರದಲ್ಲಿ ಕರೊನಾ ಸೋಂಕಿನ ಹರಡುವಿಕೆ ಮುಂದುವರೆದಿದ್ದು,ನಗರಸಭೆ ವ್ಯಾಪ್ತಿಯ ಚಿಕ್ಕಪೇಟೆ (ಶೆಟ್ಟರ ಬೀದಿ)ಯಲ್ಲಿ ನೇಕಾರಿಕೆ  ಉದ್ಯಮಿಯೊಬ್ಬರಿಗೆ ಭಾನುವಾರ ಕೋವಿಡ್-19 ದೃಢಪಟ್ಟಿದ್ದು ಇಡೀ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.ಹಾಗೆಯೇ ರಾಜೀವ್ ಧಿ ಬಡವಾಣೆಯಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು ಇವರಿಗು ಸಹ ಕೋವಿಡ್-19 ದೃಢಪಟ್ಟಿದೆ. ಹೀಗಾಗಿ ಈ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.

ಕೋವಿಡ್-19 ದೃಢಪಟ್ಟಿರುವ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರ ದ್ರವವನ್ನು ಪರೀಕ್ಷೆಗೆ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಪರಮೇಶ್ವರ ತಿಳಿಸಿದ್ದಾರೆ.

ಅಂತ್ಯ ಸಂಸ್ಕಾರಕ್ಕೆ ತೆರಳಿದವರಿಗೆ ಢವ ಢವ

ನಗರದ

ಹೊರವಲಯದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿಯೊಬ್ಬರು ಹೃದಯದ ಸಮಸ್ಯೆ ನಿಮಿತ್ತ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿದ್ದು,ಚಿಕಿತ್ಸೆ ನಂತರ ಮನೆಗೆ ಬಂದಿದ್ದಾರೆ,ಕೆಲ ದಿನಗಳಲ್ಲಿಯೇ ತೀವ್ರ ಅನಾರೋಗ್ಯಕ್ಕೀಡಾಗಿ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು,ಈ ವೇಳೆ ಈತನ ಗಂಟಲು ದ್ರವವನ್ನು ಕರೊನಾ ಪರೀಕ್ಷೆಗೆ ಕಳಿಸಲಾಗಿತ್ತು,ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿ  ಶನಿವಾರ ಮೃತಪಟ್ಟಿದ್ದರು.ಭಾನುವಾರ ಬೆಳಿಗ್ಗೆ ಮೃತ ವ್ಯಕ್ತಿಯ ಗಂಟಲ ದ್ರವದ ಪರೀಕ್ಷಾ ವರದಿ ಬಂದಿದ್ದು ಕೋವಿಡ್-19 ಇದ್ದದ್ದು ದೃಢಪಟ್ಟಿದೆ.ವಿಪರ್ಯಾಸವೆಂದರೆ ಶವವನ್ನು ಸಂಬಂಧಿಕರು ಸಂಸ್ಕಾರ ನಡೆಸಿದ್ದಾರೆ.ಆದರೆ ಶವಸಂಸ್ಕಾರದ ನಂತರ ಬಂದ ವರದಿಯಲ್ಲಿ ಆತನಿಗೆ ಕರೊನಾ ಇರುವುದು ದೃಢಪಟ್ಟಿರುವುದು,ಶವಸಂಸ್ಕಾರಕ್ಕೆ ತೆರಳಿದವರಿಗೆ ಆತಂಕ ಶುರುವಾಗಿದ್ದರೆ,ಶವ ಸಂಸ್ಕಾರಕ್ಕೆ ತೆರಳಿದವರನ್ನು ಹುಡುಕುವುದು ತಾಲೂಕು ಆಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.ಪ್ರಸ್ತುತ ಮೃತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪಕರ್ದಲ್ಲಿದ್ದ ಎಲ್ಲರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. 

ದೊಡ್ಡಬಳ್ಳಾಪುರದ ಚಿಕ್ಕಪೇಟೆ ಉದ್ಯಮಿಗೆ ಕರೊನಾ.

ಚಿಕ್ಕಪೇಟೆಯಲ್ಲಿ ಭಾನುವಾರ ಕೋವಿಡ್-19 ದೃಢಪಟ್ಟಿರುವ ವ್ಯಕ್ತಿ ರೇಷ್ಮೆ ಬಟ್ಟೆ ವ್ಯಾಪಾರಕ್ಕಾಗಿ ಪ್ರತಿ ನಿತ್ಯ ಬೆಂಗಳೂರಿಗೆ ಹೋಗಿ ಬರುತ್ತಿದ್ದರು. ಮೂರು ದಿನಗಳ ಹಿಂದೆಯಷ್ಟೆ ಜ್ವರ ಬಂದ ಹಿನ್ನೆಲೆಯಲ್ಲಿ ಯಲಹಂಕದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.ಅಲ್ಲಿ ಪರೀಕ್ಷೆ ನಡೆಸಿದಾಗ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು ಅಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ.ವ್ಯಕ್ತಿಯೊಬ್ಬರು ಮೃತಪಟ್ಟ ಪ್ರದೇಶದಲ್ಲಿ ಕರೊನಾ ವೈರಸ್ ಸೋಂಕು ಹರಡದಂತೆ ಅಗತ್ಯ ಇರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಟೋದಲ್ಲಿ ಪ್ರಚಾರ ನಡೆಸುವ ಮೂಲಕವು ಜನರಿಗೆ ತಿಳುವಳಿಕೆ ನೀಡಲಾಗುತ್ತಿದೆ ಎಂದು ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ್ ತಿಳಿಸಿದ್ದಾರೆ.

ಮೂರು ಕಂಟೈನ್ಮೆಂಟ್ ಪ್ರದೇಶ: ಶುಕ್ರವಾರದಿಂದ ನಗರದಲ್ಲಿ ಮೂರು ಕೋವಿಡ್-19 ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಚೈತನ್ಯನಗರ, ಚಿಕ್ಕಪೇಟೆ, ರಾಜೀವ್ಗಾಂದಿ ಬಡಾವಣೆಯ ಪ್ರದೇಶಗಳನ್ನು ಕಂಟೈನ್ಮೆಂಟ್ ಪ್ರದೇಶಗಳನ್ನಾಗಿ ಮಾಡಲಾಗಿದೆ. ಈ ಪ್ರದೇಶ ಹೊರಗಿನವರ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ ಈ ಪ್ರದೇಶಗಳಿಂದಲು ಸಹ ಯಾರು ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಕಂಟೈನ್ಮೆಂಟ್ ಪ್ರದೇಶದಲ್ಲಿ ಇರುವ ಆರು ಜನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಪರೀಕ್ಷಾ ಕೇಂದ್ರ ಬದಲಾವಣೆ:ಚಿಕ್ಕಪೇಟೆಯಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್-19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜೂ.29 ರಂದು ನಗರದ ಎಂಎಬಿಎಲ್ ಪ್ರೌಢ ಶಾಲೆಯಲ್ಲಿ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು  ರೋಜಿಪುರದ ಕಾರ್ಮಲ್ ಜ್ಯೋತಿ ಪ್ರೌಢಶಾಲೆಗೆ ವರ್ಗಾಯಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯ್ಯಪ್ಪರೆಡ್ಡಿ ತಿಳಿಸಿದ್ದಾರೆ.

ಆಟೋ ಪ್ರಚಾರ ಬಿರಿಸು:ಎರಡೇ ದಿನಗಳಲ್ಲಿ ಕೋವಿಡ್-19 ಮೂರು ಜನರಲ್ಲಿ ದೃಢಪಟ್ಟಿರುವುದರಿಂದ ನಗರಸಭೆ ವತಿಯಿಂದ ಸಾರ್ವಜನಿಕರಲ್ಲಿ ಕರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಅನುಸರಿಸಬೇಕಿರುವ ಮುಂಜಾಗೃತ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಆಟೋ ಪ್ರಚಾರವನ್ನು ಬಿರುಸುಗೊಳಿಸಲಾಗಿದೆ.

ಯಾವ ರಸ್ತೆ ಬಂದ್: ಚಿಕ್ಕಪೇಟೆ(ಶೆಟ್ಟರಬೀದಿ) ನಗರದ ಹೃದಯಭಾಗದಲ್ಲಿದೆ. ಹೀಗಾಗಿ ಈ ಪ್ರದೇಶದಲ್ಲಿನ ರಸ್ತೆಗಳಲ್ಲಿ ಬಸ್ ನಿಲ್ದಾಣ, ತಾಲ್ಲೂಕು ಕಚೇರಿ ಸೇರಿದಂತೆ ನಗರದಲ್ಲಿನ ವಾಣಿಜ್ಯ ಪ್ರದೇಶಗಳಿಗೆ ಹೋಗುವ ಜನರು ಹೆಚ್ಚಾಗಿ ಓಡಾಡುತ್ತಾರೆ. ಹೀಗಾಗಿ ಈ ಭಾಗದ ಚೌಕ ವೃತ್ತದಿಂದ ರುಮಾಲೆ ಛತ್ರದ ವೃತ್ತದ ಕಡೆಗೆ ಹೋಗುವ ರಸ್ತೆ, ಬೆಸ್ತರಪೇಟೆ ಕಡೆಯಿಂದ ರುಮಾಲೆ ಛತ್ರದ ಕಡೆಗೆ ಹೋಗುವ ರಸ್ತೆಗಳಿಗೆ ಬ್ಯಾರಿಕೇಡ್ ಹಾಗೂ ಮರದ ಕಡ್ಡಿಗಳನ್ನು ಕಟ್ಟುವ ಮೂಲಕ ಆಟೋ, ಬೈಕ್ ಸೇರಿದಂತೆ ಎಲ್ಲಾ ರೀತಿಯ ಸಂಚಾರವನ್ನು ಬಂದ್ ಮಾಡಲಾಗಿದೆ. ನಗರಸಭೆ ವತಿಯಿಂದ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ.

ಒಂದು ಸಾವು, 26 ಜನರಲ್ಲಿ ಕೋವಿಡ್-19 ಸೋಂಕು….

ರಾಜಕೀಯ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ಭಾರತದ ಆತ್ಮಶಕ್ತಿಯ ಮೇಲೆ ಪ್ರಹಾರ ನಡೆಸಿದ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಕೃತ್ಯಕ್ಕೆ ಅರ್ಧ ದಶಕ; ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy)

[ccc_my_favorite_select_button post_id="109926"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಇಷ್ಟವಿಲ್ಲದ ಸಂಬಂಧಿಕರ ಜೊತೆ ತಂಪು ಪಾನೀಯ (ಕೂಲ್ಡ್ರಿಂಕ್) ಕುಡಿದಿದ್ದಕ್ಕಾಗಿ ಗಂಡ ನೀಡಿದ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ (Suicide)

[ccc_my_favorite_select_button post_id="109857"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]