ದೊಡ್ಡಬಳ್ಳಾಪುರ: ನಗರದ ಚಿಕ್ಕಪೇಟೆ ಸೀಲ್ ಡೌನ್ ಹಿನ್ನೆಲೆಯಲ್ಲಿ ಎಂಎಬಿಎಲ್ ಪ್ರೌಢಶಾಲೆಯಲ್ಲಿ ನಡೆಸಲಾಗುತ್ತಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು,ರೋಜಿಪುರದ ಕಾರ್ಮಲ್ ಜ್ಯೋತಿ ಪ್ರೌಢಶಾಲೆಗೆ ವರ್ಗಾಯಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯ್ಯಪ್ಪರೆಡ್ಡಿ ಹರಿತಲೇಖನಿಗೆ ತಿಳಿಸಿದ್ದಾರೆ.
ಚಿಕ್ಕಪೇಟೆಯ ವ್ಯಕ್ತಿಯೋರ್ವರಲ್ಲಿ ಕರೊನಾ ಸೋಂಕು ದೃಢ ಪಟ್ಟ ಕಾರಣ.ಚೌಕದ ವೃತ್ತವನ್ನು ತಾಲೂಕು ಆಡಳಿತ ಸೀಲ್ ಡೌನ್ ಮಾಡಿದೆ.
ಎಂಎಬಿಎಲ್ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ 306 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು.ವೈದ್ಯಾಧಿಕಾರಿಗಳ ಸಲಹೆಯಂತೆ,ಈ ಕೇಂದ್ರದಲ್ಲಿ ಪರೀಕ್ಷೆ ಬೆರೆಯುತ್ತಿದ್ದ ವಿದ್ಯಾರ್ಥಿಗಳು ನಾಳೆಯ ವಿಜ್ಞಾನ ಪರೀಕ್ಷೆಯಿಂದ ಹಿಡಿದು ಉಳಿದ ಎಲ್ಲಾ ಪರೀಕ್ಷೆಗಳನ್ನು ಕಾರ್ಮಲ್ ಜ್ಯೋತಿ ಪ್ರೌಢಶಾಲೆಯಲ್ಲಿ ಬರೆಯಲಿದ್ದಾರೆಂದು ತಿಳಿಸಿದ್ದಾರೆ.