ಆನ್‍ಲೈನ್ ಶಿಕ್ಷಣ ಬದಲಿ ಶಿಕ್ಷಣವಾಗುವುದಕ್ಕೆ ಸಾಧ್ಯವಿಲ್ಲ – ಎಸ್.ಸುರೇಶ್ ಕುಮಾರ್

ಕೋಲಾರ: ಆನ್‍ಲೈನ್ ಶಿಕ್ಷಣ ಒಂದು ಬದಲಿ ಶಿಕ್ಷಣವಾಗಲಿಕ್ಕೆ ಸಾಧ್ಯವಿಲ್ಲ, ಬದಲಾಗಿ ಅದು ಪೂರಕ ಶಿಕ್ಷಣವಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಸಕಾಲ ಸಚಿವರಾದ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದರು.

ಕೋಲಾರ ತಾಲ್ಲೂಕಿನ ಕ್ಯಾಲನೂರಿ ಕೆ.ಪಿ.ಎಸ್ ಸರ್ಕಾರಿ ಪ್ರೌಢಶಾಲೆ ಹಾಗೂ ವೇಮಗಲ್ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರವನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮೂರನೇ ಮಹತ್ವ ದಿನ. ಇಂಗ್ಲೀಷ್, ಗಣಿತ ಪರೀಕ್ಷೆಗಳು ಮುಗಿದಿದ್ದು ಇಂದು ವಿಜ್ಞಾನ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ತಿಳಿಸಿದರು.

ಕಳೆದ ಎರಡು ವಿಷಯಗಳಲ್ಲಿ ಶೇ 98 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಹಾಗೂ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಬರೆಯುವ ವಾತಾವರಣ ಸೃಷ್ಟಿ ಮಾಡಲಾಗಿದೆ. ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಂಚಾರದಲ್ಲಿ ತೊಂದರೆಯಾಗದಂತೆ ಉಚಿತವಾಗಿ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ.  ಈ ಪರೀಕ್ಷೆಯ ನಂತರ ಸಮಾಜ ವಿಜ್ಞಾನ, ಕನ್ನಡ, ಹಿಂದಿ ಪರೀಕ್ಷೆಗಳಿದ್ದು, ಈ ಪರೀಕ್ಷೆಗಳಿಗೂ ಸಹಾ ಇದೆ ರೀತಿಯಲ್ಲಿ ಎಚ್ಚರ ಮತ್ತು ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ಆನ್‍ಲೈನ್ ಶಿಕ್ಷಣಕ್ಕೆ ಸಂಬಂಧಿಸಿದಂತೆ  ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿಯನ್ನು ಆಧರಿಸಿ ತಾತ್ಕಾಲಿಕವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದೇವೆ.ಈ ಮಾರ್ಗಸೂಚಿಯಲ್ಲಿ ಎಲ್.ಕೆ.ಜಿ, ಯು.ಕೆ.ಜಿ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಇಲ್ಲ,ಬದಲಾಗಿ ವಾರಕ್ಕೊಮ್ಮೆ ಮಕ್ಕಳ ಪೋಷಕರ ಜೊತೆ ಶಿಕ್ಷಕರು ಸಂವಾದ ಮಾಡಲು ಅವಕಾಶ ಕೊಟ್ಟಿದೆ.ರಾಜ್ಯಾದ್ಯಂತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮನೆಯಲ್ಲಿ ರೇಡಿಯೊ, ಟಿ.ವಿ,ಕೇಬಲ್ ಸಂಪರ್ಕ, ಇಂಟರ್‍ನೆಟ್,ಸ್ಮಾರ್ಟ್ ಪೋನ್ ಇವೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಆನ್‍ಲೈನ್ ಶಿಕ್ಷಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಶೇಷ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ತಜ್ಞರ ಸಮಿತಿಯಿಂದ ವರದಿ ಬಂದ ನಂತರ ಆನ್‍ಲೈನ್ ಶಿಕ್ಷಣದ ಬಗ್ಗೆ ಕ್ರಮವಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ  ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಎಸ್ ವೆಂಕಟೇಶ್, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ತಹಶೀಲ್ದಾರ್ ಶೋಭಿತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ರತ್ನಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]