ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂವರು ವ್ಯಕ್ತಿಯಲ್ಲಿ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಲಕ್ಷ್ಮಿದೇವಿಪುರದ ನಿವಾಸಿ 31 ವರ್ಷದ ಮಹಿಳೆ(ಪಿ-132219), ನೆಲಮಂಗಲ ತಾಲ್ಲೂಕಿನ ತಿಮ್ಮಕ್ಕನಹಳ್ಳಿ ನಿವಾಸಿ 85 ವರ್ಷದ ಪುರುಷ(ಪಿ-13220) ಹಾಗೂ ದೇವನಹಳ್ಳಿ ತಾಲ್ಲೂಕಿನ ಮಲ್ಲೆಪುರದ ನಿವಾಸಿ 40 ವರ್ಷದ ಪುರುಷ(ಪಿ-13221) ಇನ್‌ಫ್ಲೂಯೆನ್ಜಾ ಲೈಕ್ ಇಲ್ನೆಸ್(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದಾಗ ಕೊರೋನಾ ವೈರಾಣು ಸೋಂಕು ದೃಢಪಟ್ಟಿರುತ್ತದೆ.
ಸೋಂಕಿತ ವ್ಯಕ್ತಿಗಳು ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.