ದೊಡ್ಡಬಳ್ಳಾಪುರ: ಮಹಿಳಾ ಮತ್ತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಸಾಧಾರಣ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ ‘ಹೊಯ್ಸಳ ಪ್ರಶಸ್ತಿ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಪ್ರಶಸ್ತಿ ನೀಡಲು ಜಿಲ್ಲೆಯ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ‘ಹೊಯ್ಸಳ ಪ್ರಶಸ್ತಿ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರಕರಣವು ಆಗಸ್ಟ್ 2019 ರಿಂದ ಜುಲೈ 2020 ರೊಳಗೆ ನಡೆದಿರಬೇಕು. ದಿನಾಂಕ: 01.08.2002 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಆರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲ್ಲೂಕುಗಳ 6 ರಿಂದ 18 ವರ್ಷದೊಳಗಿನ ಅರ್ಹ ಮಕ್ಕಳು ಮಾತ್ರ ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸಿ ಆಗಸ್ಟ್ 30 ರೊಳಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಲ್ಲಿಸುವುದು.
ಅರ್ಜಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ, ಮಹಿಳಾ ಮತ್ತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂ.ಸಂ.: 080-29787445. ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ದೇವನಹಳ್ಳಿ; 080 27682268, ದೊಡ್ಡಬಳ್ಳಾಪುರ: 080-27625228, ಹೊಸಕೋಟೆ: 080-27931493, ನೆಲಮಂಗಲ: 080-2772217, ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
 
				 
						 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						