ಕಲಬುರಗಿ: ಹಿರಿಯ ಸಾಹಿತಿ ಗೀತಾ ನಾಗಭೂಷಣ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಲಬುರಗಿ ನಗರದ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದ ಗೀತಾ ನಾಗಭೂಷಣ್ ಕಳೆದು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ ನಾಗಭೂಷಣ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ನಾಡೋಜ ಮತ್ತು ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತೆಯಾಗಿದ್ದರು.2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು
ಗೀತಾ ನಾಗಭೂಷಣ ಅವರು ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ,ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿಯ ಹಿರಿಮೆ.ಅಲ್ಲದೆ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದ್ದಾಗಿತ್ತು.
ಶೋಷಿತರ ಪರವಾಗಿ ಬರವಣಿಗೆ ಮೂಲಕ ಗೀತಾ ನಾಗಭೂಷಣ್ ಧ್ವನಿ ಎತ್ತಿದ್ದರು.ಶೋಷಿತ ಮಹಿಳೆಯರ ಪರವಾಗಿ ಧ್ವನಿ ಎತ್ತಿ ಸರ್ಕಾರದ ಕಣ್ಣತೆರಸುವ ಕೆಲಸವನ್ನು ಮಾಡುತ್ತಿದ್ದರು.
ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.
ದೊಡ್ಡಬಳ್ಳಾಪುರ ಕಸಾಪವತಿಯಿಂದ ಶ್ರದ್ಧಾಂಜಲಿ
ಹಿರಿಯ ಸಾಹಿತಿ ಗೀತಾ ನಾಗಭೂಷಣ್ ನಿಧನಕ್ಕೆ ದೊಡ್ಡಬಳ್ಳಾಪುರ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಪ್ರಮೀಳಾ ಮಹದೇವ್ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						