ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳು: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ನಿಯಂತ್ರಣ ಮೀರಿ ಹರಡುತ್ತಿರುವ ಕರೊನಾ ಸೋಂಕಿನಿಂದ ತತ್ತರಿಸಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ಧಿಷ್ಟ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ ಅಸಹಾಯಕ ನಾಯಕನ ಗೋಳಾಟದಂತಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮಂಗಳವಾರ ಸಂಜೆ ದೇಶವನ್ನು ಉದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣದ ಬೆನ್ನಲ್ಲೆ ಸಿದ್ದರಾಮಯ್ಯ ವ್ಯಂಗ್ಯ ಬರಿತ ಪದಗಳಲ್ಲಿ ಮೋದಿಯವರ ಭಾಷಣವನ್ನು ಟೀಕಿಸಿದ್ದಾರೆ.

ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆಯನ್ನು ನವಂಬರ್ ತಿಂಗಳ ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು.ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು.

ಕರೊನಾ ಸೋಂಕಿನ ತೀವ್ರತೆಯನ್ನು ಅವಲೋಕಿಸಿದರೆ ಇದು ಮುಂದಿನ 2-3 ತಿಂಗಳೊಳಗೆ ಕೊನೆಗೊಳ್ಳುವಂತಹದ್ದಲ್ಲ. ಮುಂದಿನ ದಿನಗಳಲ್ಲಿ ದೇಶದಲ್ಲಿ ಹಸಿವಿನ ಸಮಸ್ಯೆ ಭೀಕರವಾಗಲಿದೆ. ಆದ್ದರಿಂದ ನಮ್ಮ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸಿದ್ದ ಅನ್ನಭಾಗ್ಯದ ಮಾದರಿಯಲ್ಲಿ ಇಡೀ ರಾಷ್ಟ್ರದಲ್ಲಿ ಬಡವರಿಗೆ ಉಚಿತ ಆಹಾರಧಾನ್ಯ ಪೂರೈಸುವ ಶಾಶ್ವತ ಯೋಜನೆಯನ್ನು ಜಾರಿಗೆ ತರಬೇಕೆಂದು ಪ್ರಧಾನಿಯವರನ್ನು ಒತ್ತಾಯಿಸುತ್ತೇನೆ.

ದೇಶದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ, ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್ ಗಳ ತೀವ್ರ ಕೊರತೆ ಇದೆ. ವೈದ್ಯರು,ದಾದಿಯರ ಕೊರತೆ ಇದೆ. ದುಬಾರಿ ಚಿಕಿತ್ಸೆ ವೆಚ್ಚದಿಂದ ಜನ ಕೊರೊನಾ ಸೋಂಕಿಗಿಂತ ಕೊರೊನಾ ಚಿಕಿತ್ಸೆಗೆ ಜನ ಹೆದರುವಂತಾಗಿದೆ. ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ.

ಪಿಎಂ ಕೇರ್ಸ್ ನಿಧಿಗೆ ನೆರವಾಗಲು ದೇಶದ ಜನರನ್ನು ವಿನಂತಿಸಿದ್ದ ಪ್ರಧಾನಿಗಳು ಅದರ ಖರ್ಚು-ವೆಚ್ಚದ ಸಂಪೂರ್ಣ ವಿವರವನ್ನು ದೇಶದ ಮುಂದಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ. ಇದಕ್ಕೆ ಚೀನಾದಿಂದಲೂ ದೇಣಿಗೆ ಪಡೆಯಲಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕಿತ್ತು.

ಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದೆ. ಇದರಿಂದ ಆಹಾರಧಾನ್ಯ, ತರಕಾರಿ, ಹಣ್ಣು ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆಯೂ ಏರುತ್ತಿದೆ. ಈ ತೈಲಬೆಲೆ ಏರಿಕೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ ಹೇಳಿಬಿಟ್ಟಿದ್ದರೆ ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ದವಾಗುತ್ತಿದ್ದರು.

ಹುತಾತ್ಮ 20 ವೀರಯೋಧರ ಬಲಿದಾನ ವ್ಯರ್ಥವಾಗುವುದಿಲ್ಲ ಎಂದು ಘೋಷಿಸಿದ್ದ ಪ್ರಧಾನಿ ಮೋದಿಯವರು, ಇದಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದರೆ ನೊಂದ ದೇಶದ ಜನತೆ ಮತ್ತು ವೀರಯೋಧರ ಕುಟುಂಬಕ್ಕೆ ಸಾಂತ್ವನ ಮಾಡಿದ ಹಾಗಾಗುತ್ತಿತ್ತು. ಈ ಘಟನೆಯ ಪ್ರಸ್ತಾವವನ್ನೇ ಮಾಡದೆ ನಿರ್ಲಕ್ಷಿಸಿರುವುದು ವಿಷಾದನೀಯ ಎಂದಿದ್ದಾರೆ.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ;

ಸಿದ್ದರಾಮಯ್ಯ (Siddaramaiah) ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. D.K.Shivakumar

[ccc_my_favorite_select_button post_id="110764"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!