ದೊಡ್ಡಬಳ್ಳಾಪುರದ 13 ಜನರಲ್ಲಿ ಕರೊನಾ ಸೋಂಕು: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪು ತಾಲ್ಲೂಕಿನ 13 ಜನರಲ್ಲಿ, ಹೊಸಕೋಟೆ ತಾಲ್ಲೂಕಿನ 09 ಜನರಲ್ಲಿ ಹಾಗೂ ದೇವನಹಳ್ಳಿ ತಾಲ್ಲೂಕಿನ 07 ಜನರಲ್ಲಿ ಸೇರಿದಂತೆ ಒಟ್ಟು 29 ಜನರಲ್ಲಿ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಪಿ-15433, ಪಿ-15434, ಪಿ-15435, ಪಿ-15437, ಪಿ-15438, ಪಿ-15439, ಪಿ-15440, ಏಳು ವ್ಯಕ್ತಿಗಳು ಇನ್‌ಫ್ಲೂಯೆನ್ಜಾ ಲೈಕ್‌ ಇಲ್ನೆಸ್‌(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ, ಪಿ-15436 ಓರ್ವ ವ್ಯಕ್ತಿಯು ತೀವ್ರ ಉಸಿರಾಟದ ತೊಂದರೆಯಿಂದ ‌ಬಳಲುತ್ತಿದ್ದ ಹಿನ್ನೆಲೆ, ಪಿ-15442, ಪಿ-15443, ಪಿ-15444, ಮೂರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11165) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ ಹಾಗೂ ಪಿ-15452 ಓರ್ವ ವ್ಯಕ್ತಿಯು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11992) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಪಿ-15441 ಓರ್ವ ವ್ಯಕ್ತಿಯ ಕರೊನಾ ಸೋಂಕಿನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದಿದ್ದಾರೆ.

ಆರೋಗ್ಯ ಇಲಾಖೆ ಸೋಂಕಿನ ಕುರಿತಾದ ವರದಿ ಬರುವ ಮುನ್ನವೇ,ತೀವ್ರ ನಿಗಾವಹಿಸಲಾಗಿದ್ದ ಕರೊನಾ ಲಕ್ಷಣಗಳು ಕಂಡುಬಂದವರನ್ನು ಮಂಗಳವಾರವೇ ಚಿಕಿತ್ಸೆಗೆ ಕರೆದೊಯ್ದ ಕಾರಣ ನಗರದ ವಿನಾಯಕನಗರ,ಚಿಕ್ಕಪೇಟೆ,ಸ್ನೇಹಲೋಕ ಎಲೆಕ್ಟ್ರಾನಿಕ್ ಹಿಂಬಾಗದ ವಸತಿ ಪ್ರದೇಶ ರಸ್ತೆ,ಕಲ್ಲುಪೇಟೆ,ದೇಶದ ಪೇಟೆ ರಾಜೀವ್ ಗಾಂಧಿ ಕಾಲೋನಿಯನ್ನು ನಗರಸಭೆವತಿಯಿಂದ ಸೀಲ್ ಡೌನ್ ಮಾಡಲಾಗಿದೆ.

ದೊಡ್ಡಬಳ್ಳಾಪುರಕ್ಕೆ ಬಂತೆ ಬೆಂಗಳೂರಿನ ಕರೊನ..?

ಕರೊನಾ ವಾರಿಯರ್ಸ್ ನೀಡಿರುವ ಮಾಹಿತಿಗಳ ಪ್ರಕಾರ ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್-19 ದೃಢಪಟ್ಟಿರುವ ಎಲ್ಲರು ಸಹ ನೇಕಾರಿಕೆ ಉದ್ಯಮದ ವಿವಿಧ ರೀತಿಯ ಕೆಲಸಗಳಲ್ಲಿ ತೊಡಗಿರುವವರೇ ಹೆಚ್ಚಾಗಿ. ಸೀರೆ ಮಾರಾಟಕ್ಕೆ ರೇಷ್ಮೆ ನೂಲು ತರುವ ಸಲುವಾಗಿ ಬೆಂಗಳೂರು ಹೋಗಿ ಬಂದಿರುವವರೇ ಆಗಿರುವುದರಿಂದ ಬೆಂಗಳೂರಿನ ಕರೊನಾ ದೊಡ್ಡಬಳ್ಳಾಪುರಕ್ಕೆ ಒಕ್ಕರಿಸಿದೆ ಎಂದು ಅಂದಾಜಿಸಲಾಗಿದೆ.

ಕರೊನಾ ನಿಯಂತ್ರಣಕ್ಕೆ ಶಾಸಕ ಟಿ.ವೆಂಕಟರಮಣಯ್ಯ ‌ನೇತೃತ್ವದಲ್ಲಿ ಸಭೆ ಜುಲೈ 3ಕ್ಕೆ.

ನಗರ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತೆಯಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲು ಜುಲೈ 3 ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಟಿ.ವೆಂಕಟರಮಣಯ್ಯ ಅವರ ಅಧ್ಯಕ್ಷತೆಯಲ್ಲಿ ನಗರದ ಬಸವ ಭವನದಲ್ಲಿ ಸಭೆ ನಡೆಯಲಿದೆ.

ಉಳಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇತರ ತಾಲೂಕುಗಳಾದ ಹೊಸಕೋಟೆ ತಾಲ್ಲೂಕಿನ  ಪಿ-15424, ಪಿ-15425, ಇಬ್ಬರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11973) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಪಿ-15426, ಪಿ-15427, ಪಿ-15428, ಮೂರು ವ್ಯಕ್ತಿಗಳು ಇನ್‌ಫ್ಲೂಯೆನ್ಜಾ ಲೈಕ್‌ ಇಲ್ನೆಸ್‌(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಹಾಗೂ ಪಿ-15429, ಪಿ-15430, ಪಿ-15431, ಪಿ-15432, ನಾಲ್ಕು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11167) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ದೇವನಹಳ್ಳಿ ತಾಲ್ಲೂಕಿನ ಪಿ-15445, ಪಿ-15446, ಪಿ-15447, ಪಿ-15448, ನಾಲ್ಕು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-9907) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ ಹಾಗೂ ವಿಜಯಪುರದ ಪಿ-15449, ಪಿ-15450, ಪಿ-15451, ಮೂರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-10824) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಗಳು ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಬಿಹಾರ ಚುನಾವಣೆಯಲ್ಲಿ ಹಿನ್ನಡೆ.. ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು; ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಹಿನ್ನಡೆ.. ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು; ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (Cmsiddaramaiah) ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು ಎಂದರು.

[ccc_my_favorite_select_button post_id="116170"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!