ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ವಿವಿಧ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಇಂದು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್.ಸುರೇಶ್‌ಕುಮಾರ್ ಅವರು ಭೇಟಿ ನೀಡಿ ಕರೊನಾ ವೈರಾಣು ಸೋಂಕು ಹರಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.
ಶಿಕ್ಷಣ ಸಚಿವರು ಮೊದಲಿಗೆ ನೆಲಮಂಗಲದ ತಾಲ್ಲೂಕಿನ ತ್ಯಾಮಗೊಂಡ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ, ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ವೀಕ್ಷಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ನಂತರ ನೆಲಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೂ ಭೇಟಿ ನೀಡಿದರು.
ನೆಲಮಂಗಲ ತಾಲ್ಲೂಕು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ,ಜಿಲ್ಲಾ ಪಂಚಾಯತಿ ಸದಸ್ಯ ನಂಜುಂಡಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ನೆಲಮಂಗಲ ತಾಲ್ಲೂಕು ತಹಶೀಲ್ದಾರ್ ಶ್ರೀನಿವಾಸಯ್ಯ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಇತರರು ಇದ್ದರು