ದೊಡ್ಡಬಳ್ಳಾಪುರ: ರಾಜ್ಯದ ಕರೊನಾ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆರಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಿನೇ ದಿನೇ ಉಲ್ಬಣಿಸುತ್ತಿದ್ದು,ಇಂದು ಜಿಲ್ಲಾಧಿಕಾರಿಯವರಿಗೂ ಕರೊನಾ ಸೋಂಕು ದೃಢಪಟ್ಟಿದೆ.
ಬುಧವಾರವಷ್ಟೆ ಪರೀಕ್ಷೆಗೆ ಒಳಪಟ್ಟಿದ್ದ ಅವರಿಗೆ ಕರೊನಾ ಇರುವುದು ದೃಢ ಪಟ್ಟಿದೆ ಎಂದು ಸ್ವತಃ ಜಿಲ್ಲಾಧಿಕಾರಿಗಳೆ ಹರಿತಲೇಖನಿಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು,ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ.ಜಿಲ್ಲೆಯ ಜನರ ಆಶೀರ್ವಾದದಿಂದ ಶೀಘ್ರ ಗುಣಮುಖನಾಗಿ ಬರುವೆನೆಂಬ ವಿಶ್ವಾಸ ವ್ಯಕ್ತಪಡಿಸಿದರು.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕಚೇರಿ ಶೀಲ್ಡ್ ಡೌನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.