ದೊಡ್ಡಬಳ್ಳಾಪುರ: ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿ ಶುಕ್ರವಾರ ರಾತ್ರಿ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ್(52) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮೃತರನ್ನು ಕರೇನಹಳ್ಳಿ ನಿವಾಸಿ ಎಂದು ಗುರುತಿಸಲಾಗಿದೆ.
ನೇಕಾರಿಕೆ ವೃತ್ತಿಯಲ್ಲಿದ್ದ ಚಂದ್ರಶೇಖರ್ ಮನೆಗೆ ತೆರುಳುವಾಗ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.ಇನ್ನು ನೋಂದಣಿ ಸಂಖ್ಯೆಯನ್ನು ಸಹ ಹೊಂದಿರದ ದ್ವಿಚಕ್ರ ವಾಹನವನ್ನು ಅಪಘಾತ ನಡೆದ ಸ್ಥಳದಲ್ಲಿಯೇ ಬಿಟ್ಟು ಸವಾರರು ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.