ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು,ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕರೊನಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಅನುದಾನದ ಕೊರತೆಯಿರುವುದರಿಂದ ಸರಕಾರದಿಂದ ತ್ವರಿತವಾಗಿ ಅನುಧಾನ ಬಿಡುಗಡೆ ಮಾಡಿಸಬೇಕೆಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್,ಶಾಸಕ ಟಿ.ವೆಂಕಟರಮಣಯ್ಯರನ್ನು ಮನವಿ ಮಾಡಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೊನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕರೊನಾ ನಿಯಂತ್ರಣಕ್ಕೆ ಅನುದಾನದ ಕೊರತೆ ಎದುರಾಗಿದೆ.ಲಾಕ್ ಡೌನ್ ಹಿನ್ನೆಲೆ ಕರ ವಸೂಲಿ ಮಾಡಲಾಗದ ಕಾರಣ ಗ್ರಾಮಗಳಲ್ಲಿ ಸಿಬ್ಬಂದಿಗಳಿಗೆ ವೇತನ,ಸ್ವಚ್ಚತೆ,ಸ್ಯಾನಿಟೈಸರ್ ಮಾಡಲು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲು ಸಹ ಕೊರತೆ ಉಂಟಾಗಿದ್ದು ತ್ವರಿತವಾಗಿ ಅನುದಾನ ಬಿಡುಗಡೆ ಅಗತ್ಯ ಎಂದರು.
ಇದೆ ವೇಳೆ ಪಿಡಿಒಗಳು ಅನುದಾನ ಕೊರತೆಯಿದ್ದರು ಮೈಮರೆಯದೆ ತ್ವರಿತವಾಗಿ ಕಾರ್ಯಪ್ರವೃತರಾಗಿ,ಸಾಧ್ಯವಿರುವ ಕ್ರಮಗಳನ್ನು ಕೈಗೊಂಡು ಜನರಲ್ಲಿ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.
ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,ನಗರ ಪ್ರದೇಶದಲ್ಲಿ ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು,ಗ್ರಾಮೀಣ ಪ್ರದೇಶಕ್ಕೆ ಹರಡಿದರೆ ಪರಿಸ್ಥಿತಿ ತೀವ್ರ ಸ್ವರೂಪ ಪಡೆಯಲಿದೆ.ಈ ನಿಟ್ಟಿನಲ್ಲಿ ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತೆ ವಹಿಸುವುದು ಅಗತ್ಯ ಎಂದರು.ಇದೇ ವೇಳೆ ಅನುದಾನ ಕೊರತೆ ಕುರಿತಂತೆ ಅಪರ ಜಿಲ್ಲಾಧಿಕಾರಿ ಕರೆ ಮಾಡಿದ ಅವರು,ತ್ವರಿತವಾಗಿ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದ ಅನುದಾನ ಬಿಡುಗಡೆ ಮನವಿ ಮಾಡಿದರು.
ಕರೊನಾ ಸೋಂಕು ನಿರ್ವಹಣೆ ಹಾಗೂ ತಡೆಗಟ್ಟಲು ಇಲಾಖೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಮುಂಜಾಗ್ರತೆಯಿಂದ ಕರೊನಾ ಸೋಂಕು ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ ಎಂದರು.
ಸಭೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ರಾಘವ ಎಸ್.ಗೌಡ,ಇಒ ಮುರುಡಯ್ಯ,ಬಿಇಒ ಬೈಯಪ್ಪರೆಡ್ಡಿ,ಸಹಾಯಕ ನಿರ್ದೇಶಕಿ ಸಿ.ಗೀತಾಮಣಿ,ಗ್ರಾಪಂ ಪಿಡಿಒಗಳು,ಆಡಳಿತಾಧಿಕಾರಿಗಳು ಹಾಜರಿದ್ದರು.