ಖಾಸಗಿ ಶಾಲೆ ಶಿಕ್ಷಕರಿಗೆ ನೆರವಾಗಲು ಸರ್ಕಾರಿ ಶಾಲೆ ಶಿಕ್ಷಕರಿಗೆ ಕರೆ ನೀಡಿದ ಎಸ್.ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದ ಖಾಸಗಿ ಶಾಲೆಗಳಲ್ಲಿ ಕೆಲಸ‌ ಮಾಡುವ ಶಿಕ್ಷಕರು ತೀವ್ರ ಸಂಕಷ್ಟದಲ್ಲಿರುವುದು ಸರ್ಕಾರದ ಗಮನದಲ್ಲಿದೆ. ಇವರುಗಳ ಪರಿಸ್ಥಿತಿ ನನಗೆ ವೇದನೆಯನ್ನು ಹೆಚ್ಚಿಸಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಖಾಸಗಿ ಶಾಲೆ ಶಿಕ್ಷಕರಿಗೆ ನೆರವಾಗುವ ವಿಚಾರ ಕುರಿತು ಶಿಕ್ಷಣ ಇಲಾಖೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಸಹಶಿಕ್ಷಕರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಚರ್ಚೆ ಕುರಿತು ಮಾಹಿತಿ‌ ನೀಡಿರುವ ಅವರು,ಸಂಕಷ್ಟದಲ್ಲಿರುವ ಈ ಎಲ್ಲಾ ಖಾಸಗಿ ಶಾಲಾ  ಶಿಕ್ಷಕರೂ ನಮ್ಮ ಕುಟುಂಬದವರೇ.ಅವರಿಗೆ ಅಗತ್ಯ ನೆರವು ನೀಡುವುದು ನಮ್ಮ ಧರ್ಮ ಎಂದು ನಾನು ಮನವಿ ಮಾಡಿದೆ.‌

ಇಂತಹ ಸಂದರ್ಭದಲ್ಲಿ‌ ಖಾಸಗಿ‌ ಶಾಲೆಗಳಲ್ಲಿ ಕೆಲಸ ಮಾಡುವ ನಮ್ಮ‌‌ ಶಿಕ್ಷಕರಿಗೆ ಒಂದೆರಡು ದಿನಗಳ ವೇತನವನ್ನು ನೀಡಲು ನಮ್ಮ ಶಿಕ್ಷಕ ಸಮುದಾಯ ಮುಂದೆ ಬರಬೇಕೆಂದು ಮನವಿ ಮಾಡಿದ್ದೇನೆ.

ಸರ್ಕಾರದ ವತಿಯಿಂದ, ಇಲಾಖೆಯ ಲಭ್ಯ ಸಂಪನ್ಮೂಲಗಳ ಮೂಲಕವೂ ಕಷ್ಟದಲ್ಲಿರುವ ನಮ್ಮ ಖಾಸಗಿ ಶಾಲಾ ಶಿಕ್ಷಕರಿಗೆ ಇತಿಮಿತಿಗಳಲ್ಲಿ ಆರ್ಥಿಕ ಸಹಕಾರ ನೀಡಲು ಸಹ ಸರ್ಕಾರ ಅವಕಾಶಗಳನ್ನು ಅವಲೋಕಿಸುತ್ತಿದೆ. 

ಈ ಎರಡೂ ಸಂಘಟನೆಗಳ  ಪ್ರಮುಖರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.ಇದೇ ವೇಳೆ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ  ನಾರಾಯಣಸ್ವಾಮಿ ತಮ್ಮ ಒಂದು ತಿಂಗಳ ವೇತನವನ್ನೇ ನೀಡುತ್ತೇನೆ ಎಂದಿದ್ದಾರೆ.ನಾನೂ ಸಹ ನನ್ನ ಪಾಲನ್ನು ನೀಡುತ್ತಿದ್ದೇನೆ. 

ಆತ್ಮೀಯ‌ ಶಿಕ್ಷಕ‌ ಬಂಧುಗಳೇ, ಸರ್ಕಾರ‌ ಅತ್ಯಂತ ಕಠಿಣ ಸಂದರ್ಭದಲ್ಲೂ ನಿಮ್ಮ ವೇತನ ಭತ್ಯೆಗಳಿಗೆ ತಡೆ ಮಾಡಿಲ್ಲ. ಆದುದರಿಂದ  ಇಂತಹ ಸಂದರ್ಭದಲ್ಲಿ ಮಾನವೀಯ ಗುಣಗಳನ್ನು ನಾವೆಲ್ಲ ಮೆರೆಯಬೇಕಿದೆ. 

ನನ್ನೆಲ್ಲ ಆತ್ಮೀಯ ಶಿಕ್ಷಕರು ಇಂತಹ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಖಾಸಗಿ ಶಿಕ್ಷಕರಿಗೆ ತಮ್ಮ ಸಹಕಾರವನ್ನು ನೀಡುವ ಮೂಲಕ ಸಮಾಜಕ್ಕೆ ಇಂದು ಅವಶ್ಯವಿರುವ ಸಕಾರಾತ್ಮಕ‌ ಸಂದೇಶವನ್ನು ನೀಡಬೇಕಾಗಿ ನನ್ನ ಕಳಕಳಿಯ ಮನವಿ ಮಾಡುತ್ತೇನೆ ಎಂದಿದ್ದಾರೆ.

ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು, ಸಮಗ್ರ ಶಿಕ್ಷಣದ ನಿರ್ದೇಶಕರು ಭಾಗವಹಿಸಿದ್ದರು ಎಂದಿದ್ದಾರೆ.

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!