ದೊಡ್ಡಬಳ್ಳಾಪುರದ ಅರಣ್ಯಾಧಾರಿತ ಕೃಷಿ ಪದ್ದತಿ ಕುರಿತು ಮಾಹಿತಿ ಪಡೆದ ಪ್ರಸಿದ್ಧ ನಟ,ನಿರ್ದೇಶಕ ಶಿವಮಣಿ..!

ದೊಡ್ಡಬಳ್ಳಾಪುರ: ಕನ್ನಡ ಚಲನಚಿತ್ರರಂಗದ ಪ್ರಸಿದ್ಧ ನಟ,ನಿರ್ದೇಶಕ ಶಿವಮಣಿ ಬುಧವಾರ ಸಾವಯವ ಕೃಷಿ ತಜ್ಞ ಶಿವನಾಪುರ ರಮೇಶ್ ಅವರನ್ನು ಭೇಟಿ ಮಾಡಿ ಅರ ಅರಣ್ಯ ಆದಾರಿತ ಕೃಷಿ,ತೋಟಗಾರಿಕೆ ಕುರಿತು ಮಾಹಿತಿ ಪಡೆದರು. 

ಚಿತ್ರ ನಿರ್ದೇಶನದ ಬಿಡುವಿನ ವೇಳೆಯಲ್ಲಿ ಸುಸ್ಥಿರ ಕೃಷಿಯಲ್ಲಿ ತೊಡಗಿಸಿಕೊಂಡು ಪರಿಸರ, ಪ್ರಾಣಿ, ಪಕ್ಷಿಗಳೊಂದಿಗೆ ಬದುಕಬೇಕು ಎನ್ನುವ ಉದ್ದೇಶದೊಂದಿಗೆ ಮಾಗಡಿ ಸಮಿಪ ತೋಟ ಮಾಡಲು ಹೊರಟಿರುವುದಾಗಿ ತಿಳಿಸಿದ ಶಿವಮಣಿ ಅವರು, ನಮ್ಮ ತಂದೆ ಕೇರಳದಲ್ಲಿ ಗೋಡಂಬಿ ಕೃಷಿಕರಾಗಿದ್ದರು. ಆದರೆ ಬೆಂಗಳೂರಿಗೆ ಬಂದ ನಂತರ ಕೃಷಿಯಿಂದ ತುಂಬಾ ದೂರ ಬಂದಿದ್ದೆವು. ಈಗ ಮತ್ತೆ ಮಣ್ಣಿನೊಂದಿಗೆ ನಿಕಟ ಸಂಪರ್ಕದಲ್ಲಿ ಇರಬೇಕು ಎನ್ನುವ ಆಸೆ ಚಿಗುರಿದೆ. ಕರೊನಾ ಲಾಕ್ಡೌನ್ ನಂತರ ನಗರದಲ್ಲಿ ಬಹುತೇಕ ಜನ ಕೃಷಿಯತ್ತ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಆದರೆ ನಾನು ಒಂದು ವರ್ಷದಿಂದಲು ಕೃಷಿ ಕೆಲಸ ಆರಂಭಿಸಿ ತೆಂಗು, ಅಡಿಕೆ ಹಾಗೂ ಹೈನುಗಾರಿಕೆ ಆರಂಭಿಸುವ ಸಿದ್ದತೆಯಲ್ಲಿ ಇದ್ದೆ. ಶಿವನಾಪುರ ರಮೇಶ್ ಆವರ ಮಾರ್ಗದರ್ಶನದ ನಂತರ ಯಾವುದೇ ಗಿಡ ನೆಡುವುದು ಅಂದರೆ ಅದಕ್ಕೆ ಭೂಮಿಯ ಸಿದ್ದತೆ ಎಷ್ಟು ಮುಖ್ಯ ಎನ್ನುವುದು ಅರಿವಿಗೆ ಬಂದಿದೆ. ನಾವು  ಒಂದು ಸಿನಿಮಾ ಸಿದ್ದತೆಗೆ ವರ್ಷಗಟ್ಟಲೆ ಪೂರ್ವ ಸಿದ್ದತೆ ಮಾಡಿಕೊಳ್ಳುತ್ತೇವೆ. ಆದರೆ ಸಸಿ ನೆಡುವುದೆಂದರೆ ಒಂದೇ ದಿನದಲ್ಲಿ ಗುಂಡಿ ತೋಡಿ ಗೊಬ್ಬರ ಹಾಕಿ ನೀರು ಕೊಟ್ಟರೆ  ಸಸಿ ಬೆಳೆಯುತ್ತದೆ ಎನ್ನುವ ತಿಳುವಳಿಕೆಯೇ ತಪ್ಪು ಎನ್ನುವುದು ರಮೇಶ್ ಅವರ ನರ್ಸರಿಗೆ ಭೇಟಿ ನೀಡಿ ಮಾಹಿತಿ ಪಡೆದ ನಂತರ ಅರ್ಥವಾಗಿದೆ ಎಂದರು. 

ಕರೊನಾ ಕಾರಣದಿಂದಾಗಿ ಲಾಕ್‌ಡೌನ್‌ ಜಾರಿಗೆ ಬಂದ ಮೇಲೆ ನಾವು ಪ್ರಕೃತಿಯೊಂದಿಗೆ ಎಷ್ಟೊಂದು ಎಚ್ಚರದಿಂದ ಬದುಕಬೇಕು ಎನ್ನುವುದು ಸಾಮಾನ್ಯ ಜನರಿಗೂ ಅರ್ಥವಾಗಿದೆ. ಇದನ್ನು ಮರೆತರೆ ಮುಂದಿನ ದಿನಗಳಲ್ಲಿ ಕೊರೊನಾ ವೈರಸ್ಗಿಂತಲು ಭೀಕರವಾದ ವೈರಸ್ಗಳು ಹುಟ್ಟಿಕೊಂಡು ಮನುಕುಲವನ್ನೇ ನಾಶ ಮಾಡಲಿವೆ.ಲಾಕ್ಡೌನ್ ಕೃಷಿ ಹಾಗೂ ಕೃಷಿಕರಿಗೆ ಗೌರವ ತಂದುಕೊಟ್ಟಿದೆ ಎಂದು ಹೇಳಿದರು.

ಶಿವಮಣಿ ಅವರು ನಾಗಸಂದ್ರ ಗ್ರಾಮದ ಕೃಷಿಕ  ಮುದ್ದಪ್ಪ ಅವರ ತೋಟಕ್ಕೆ ಭೇಟಿ ನೀಡಿ ವಿವಿಧ ಸಸಿಗಳ ಬೆಳವಣಿಗೆ ಕುರಿತು ಮಾಹಿತಿ ಪಡೆದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ; ಶೇ.78.45 ಮತದಾನ.. ಸ್ಥಳೀಯರಲ್ಲದವರಿಂದ ಮತದಾನದ ಆರೋಪ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ; ಶೇ.78.45 ಮತದಾನ.. ಸ್ಥಳೀಯರಲ್ಲದವರಿಂದ ಮತದಾನದ ಆರೋಪ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯ (Bashettihalli town panchayat election) ಪೂರ್ಣಗೊಂಡಿದೆ.

[ccc_my_favorite_select_button post_id="117623"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!