ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 36 ಕರೊನಾ ಸೋಂಕು ಪ್ರಕರಣಗಳು ದೃಢ ಪಟ್ಟಿದ್ದು,ಒಂದು ಸಾವಿನ ಪ್ರಕರಣ ವರದಿಯಾಗಿದೆ.
ದೇವನಹಳ್ಳಿ ತಾಲ್ಲೂಕಿನಲ್ಲಿ 10, ಹೊಸಕೋಟೆ ತಾಲ್ಲೂಕಿನಲ್ಲಿ 2, ನೆಲಮಂಗಲ ತಾಲ್ಲೂಕಿನಲ್ಲಿ 8 ಹಾಗೂ ಬೆಂಗಳೂರು ನಗರ ಜಿಲ್ಲೆಯ 16 ಪ್ರಕರಣಗಳು ಸೇರಿವೆ.
ಹೊಸಕೋಟೆ ತಾಲ್ಲೂಕಿನ ಸಮೆತೇನಹಳ್ಳಿಯ 58 ವರ್ಷದ ಮಹಿಳೆ ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಮರಣ ಹೊಂದಿದ್ದಾರೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪ್ರಸ್ತುತ ಯಾವುದೇ ಪ್ರಕರಣ ದೃಢಪಟ್ಟಿಲ್ಲವಾಗಿದ್ದರು,ಮುಂಜಾಗ್ರತಾ ಕ್ರಮವಾಗಿ ನಗರಸಭೆ ವತಿಯಿಂದ ನಗರದ ನಗರ್ತರ ಪೇಟೆ ಹಾಗೂ ಮಾರ್ಕೆಟನ್ನು ಸೀಲ್ ಡೌನ್ ಮಾಡಲಾಗಿದೆ.