ಶಿಕ್ಷಕರ ನೆರವಿಗೆ ಬಾರದೇ ಮೌಲ್ಯಮಾಪನ ನಡೆಸುವ ನೈತಿಕತೆ ಶಿಕ್ಷಣ ಸಚಿವರಿಗೆ ಇಲ್ಲ – ಎ.ಪಿ.ರಂಗನಾಥ್

ದೊಡ್ಡಬಳ್ಳಾಪುರ: ಕೊವಿಡ್-19 ಕಾರಣದಿಂದಾಗಿ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರು ಸಂಕಷ್ಟದಲ್ಲಿರುವಾಗ,ಶಿಕ್ಷಕರ ನೆರವಿಗೆ ಬಾರದೇ ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನ ಆರಂಭಿಸಲು ಹೊರಟಿರುವ ಶಿಕ್ಷಣ ಸಚಿವರಿಗೆ ಯಾವುದೇ ನೈತಿಕತೆ ಇಲ್ಲ.ಸರ್ಕಾರ ಶಿಕ್ಷಕರಿಗೆ ಆರ್ಥಿಕ ನೆರವು ಹಾಗೂ  ವೈದ್ಯಕೀಯ ಪ್ಯಾಕೇಜ್ ನೀಡದಿದ್ದರೆ ಶಿಕ್ಷಕರು ಮೌಲ್ಯ ಮಾಪನ ಬಹಿಷ್ಕಾರದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಶಿಕ್ಷಕರ ಮತ್ತು ಆಡಳಿತ ಮಂಡಲಿ ಫೋರಂ, ಕರ್ನಾಟಕ ಸಂಸ್ಥೆಯ ಅಧ್ಯಕ್ಷ ಎ.ಪಿ.ರಂಗನಾಥ್ ಹೇಳಿದ್ದಾರೆ.

ನಗರದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊವಿಡ್-19 ಲಾಕ್ಡೌನ್ ಕಾರಣದಿಂದಾಗಿ ಬಹಳಷ್ಟು ಖಾಸಗಿ ಶಾಲೆಗಳಲ್ಲಿ ಶಿಕ್ಷಕರಿಗೆ 3 ತಿಂಗಳಿನಿಂದ ಸಂಬಳ ನೀಡದೇ ಇರುವುದರಿಂದ ಶಿಕ್ಷಕರು ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಹಠಕ್ಕೆ ಬಿದ್ದು ನಡೆಸಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿಯೇ ಪರೀಕ್ಷೆ ಎದುರಿಸಿದ್ದಾರೆ. ಶಿಕ್ಷಕರ ನೆರವಿಗೆ ಬಾರದ ಸರ್ಕಾರ ಎಸ್ಎಸ್ಎಲ್ಸಿ ಮೌಲ್ಯ ಮಾಪನ ಮಾಡುವಂತೆ ಆದೇಶಿಸಿರುವುದು ಎಷ್ಟು ಸರಿ. ಇತ್ತೀಚೆಗೆ ನಡೆದ ಪಿಯುಸಿ ಮೌಲ್ಯಮಾಪನದ ವೇಳೆ ನೂರಾರು ಕಿ.ಮೀ ದೂರದಿಂದ ಬೆಂಗಳೂರಿಗೆ ಉಪನ್ಯಾಸಕರು ಆಗಮಿಸಿದ್ದರು. ಈಗ ಎಸ್ಎಸ್ಎಲ್ಸಿ ಮೌಲ್ಯಮಾಪನ ಮಾಡಲು ನೂರಾರು ಶಿಕ್ಷಕರು ಸೇರುತ್ತಾರೆ. ಆದರೆ ಶಿಕ್ಷಕರಿಗೆ ಯಾವುದೇ ವೈದ್ಯಕೀಯ ಭದ್ರತೆ ಇಲ್ಲ. ಶಾಲಾ ಶಿಕ್ಷಕರಿಗೆ ಈ ವೇಳೆ ಕೊವಿಡ್-19 ಸೋಂಕು ತಗುಲಿದರೆ ಯಾರು ಹೊಣೆ ? ಎಂದರು.

ಖಾಸಗಿ ಶಾಲೆಗಳಿಗೆ ಸರ್ಕಾರ ಬಾಕಿ ಇರಿಸಿಕೊಂಡಿರುವ ಸುಮಾರು 1025 ಕೋಟಿ ಆರ್.ಟಿ.ಇ ಹಣವನ್ನು ಕೂಡಲೇ ಬಿಡುಗಡೆ ಮಾಡಿದರೆ ಶಾಲೆಗಳಿಗೆ ಸಹಕಾರಿಯಾಗುತ್ತದೆ. ಶಿಕ್ಷಕರಿಗೆ ಈ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಶಿಕ್ಷಕರಿಗೆ ವೈದ್ಯಕೀಯ ವಿಮೆ ಒದಗಿಸಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಮೌಲ್ಯಮಾಪನ ಬಹಿಷ್ಕಾರ..?

ತಾಲೂಕು ಅನುದಾನ ರಹಿತ ಖಾಸಗಿ ಶಾಲೆಗಳ  ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಎಷ್ಟೋ ಶಾಲೆಗಳಲ್ಲಿ ಶಿಕ್ಷಕರು ಬರೀ 4.5 ಸಾವಿರ ರೂಗಳ ಸಂಬಳಕ್ಕೆ ದುಡಿಯುತ್ತಿದ್ದಾರೆ. ಖಾಸಗಿ ಆಡಳಿತ ಮಂಡಲಿಗಳು ಶಿಕ್ಷಕರಿಗೆ ಸಂಬಳ ನೀಡದೇ ಶಿಕ್ಷಕರು ಅನ್ಯ ಉದ್ಯೋಗಗಳತ್ತ ತೆರಳಬೇಕಿದೆ. ಆದರೆ ಸರ್ಕಾರಿ ಶಾಲೆಯ ಶಿಕ್ಷಕರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಬೇಕು.

ಸರ್ಕಾರ ಖಾಸಗಿ ಶಾಲೆಗಳ  ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ದಿಸೆಯಲ್ಲಿ ಶಿಕ್ಷಕರಿಗೆ ಆರ್ಥಿಕ ಪ್ಯಾಕೇಜ್ ಹಾಗೂ ವೈದ್ಯಕೀಯ ವಿಮೆಯ ಬೇಡಿಕೆಗಳು ಈಡೇರದಿದ್ದರೆ ಜುಲೈ 13ರಂದು ನಡೆಯಲಿರುವ ಎಸ್ಎಸ್ಎಲ್ಸಿ ಮೌಲ್ಯ ಮಾಪನ ಕಾರ್ಯವನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ರಾಜ್ಯದಲ್ಲಿ ಸುಮಾರು 2.5 ಲಕ್ಷ ಶಿಕ್ಷಕರಿದ್ದು, ಒತ್ತಡಕ್ಕೆ ಮಣಿದ ಕೆಲವಷ್ಟು ಶಿಕ್ಷಕರನ್ನು ಹೊರತುಪಡಿಸಿ ಬಹಳಷ್ಟು ಶಿಕ್ಷಕರು ಮೌಲ್ಯಮಾಪನ ಬಹಿಷ್ಕಾರಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಶಿಕ್ಷಕರ ಮತ್ತು ಆಡಳಿತ ಮಂಡಲಿ ಫೋರಂ ಕಾರ್ಯದರ್ಶಿ ಸೂಡಿ ಸುರೇಶ್, ಜಂಟಿ ಕಾರ್ಯದರ್ಶಿ ಟಿ.ಕೆ.ನರಸೇಗೌಡ, ತಾಲೂಕು ಅನುದಾನ ರಹಿತ ಖಾಸಗಿ ಶಾಲೆಗಳ  ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮೋಹನ್ ನಾಯಕ್, ಪ್ರಧಾನ ಸಂಚಾಲಕ ದಾದಾಪೀರ್ ಭಾಗವಹಿಸಿದ್ದರು.

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]