ದೊಡ್ಡಬಳ್ಳಾಪುರ: “ವಿಶ್ವ ಜನಸಂಖ್ಯಾ ದಿನ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಕುಟುಂಬ ಯೋಜನೆಗೆ ಶ್ರಮಿಸಿದ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಎಂ.ನಾಗರಾಜ ಅವರು ಜನಸಂಖ್ಯಾ ನಿಯಂತ್ರಣ ಹಾಗೂ ಕುಟುಂಬ ಯೋಜನೆಯ ಪ್ರಾಮುಖ್ಯತೆ ಕುರಿತು ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ.ಕೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಎ.ಎನ್.ಶ್ರೀನಿವಾಸ್, ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.