ಚಿಕ್ಕಬಳ್ಳಾಪುರ: ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ರೂ.18.63 ವೆಚ್ಚದಲ್ಲಿ 12 ಜನ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಆಟೋಗಳನ್ನು ವಿತರಣೆ, ಆರೋಗ್ಯ ಇಲಾಖೆಯಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ 500 ಜನರ ಪರೀಕ್ಷಾ ಸಾಮರ್ಥ್ಯದ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಉದ್ಘಾಟನೆ ಹಾಗೂ ನಗರಸಭೆಯ 29 ಜನ ಪೌರಕಾರ್ಮಿಕರಿಗೆ 14 ನೇ ವಾರ್ಡ್ ಕಂದವಾರ ಬಳಿ ಉಚಿತ ನಿವೇಶನಗಳ ಹಕ್ಕುಪತ್ರಗಳನ್ನು ವಿತರಣೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿ಼ಯಾ ತರನ್ನಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ತಾ.ಪಂ ಅಧ್ಯಕ್ಷರಾದ ರಾಮಸ್ವಾಮಿ, ಎಪಿಎಂಸಿ ಅಧ್ಯಕ್ಷರಾದ ನಾರಾಯಣಸ್ವಾಮಿ, ಮುಖಂಡರಾದ ಮರಳಕುಂಟೆ ಕೃಷ್ಣಮೂರ್ತಿ, ಎಂ.ಎಫ್.ಸಿ ನಾರಾಯಣಸ್ವಾಮಿ,ಗಜೇಂದ್ರ, ಕೆ.ವಿ.ನಾಗರಾಜ್, ಹಾಗೂ ಸಂಬಂಧಿಸಿದ ಇಲಾಖಾಧಿಕಾರಿಗಳು ಹಾಜರಿದ್ದರು.