ಫಸಲ್ ವಿಮಾ ಯೋಜನೆಯ ಪ್ರಚಾರಕ್ಕೆ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ಸೂಚನೆ

ದೊಡ್ಡಬಳ್ಳಾಪುರ: ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಡೆಯುವ ನಿಟ್ಟಿನಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ.ನಾಯಕ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 202021ನೇ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಬಜಾಜ್ ಅಲಾಯನ್ಸ್ ಕಂಪೆನಿ, ಇವರ ಸಹಯೋಗದೊಂದಿಗೆ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ಸಾಲು ಹಾಗೂ ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಮುಂಗಾರು ಹಂಗಾಮಿನಲ್ಲಿ ಎಲ್ಲಾ ರೈತರು ಸೇರಿದಂತೆ ಬೆಳೆ ಸಾಲ ಪಡೆಯದ ರೈತರು ಯೋಜನೆಯ ಸೌಲಭ್ಯ ಪಡೆಯಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಪಾಸ್ ಪುಸ್ತಕ, ಕಂದಾಯ ರಶೀದಿಯನ್ನು ನೀಡುವುದು. ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಯೋಜನೆಯಡಿ ಒಳಪಡಿಸಲಾಗುವುದು ಎಂದರಲ್ಲದೆ ಬೆಳೆ ಸಾಲ ಪಡೆದ ರೈತರು ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದೇ ಇದ್ದಲ್ಲಿ, ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ ಏಳು ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಗೆ ಪತ್ರವನ್ನು ನೀಡಿದಲ್ಲಿ ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು ಎಂದು ತಿಳಿಸಿದರು.

ಪ್ರಸಕ್ತ ಸಾಲು ಮತ್ತು ಹಂಗಾಮಿನಲ್ಲಿ ಅಧಿಸೂಚಿತ ವಿಮಾ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ.25 ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ಎಲ್ಲಾ ರೈತರಿಗೆ ಇತ್ಯರ್ಥಪಡಿಸಿ ಮುಂದಿನ ಅವಧಿಗೆ ಅವರುಗಳ ಬೆಳೆ ವಿಮೆಯನ್ನು ರದ್ದುಪಡಿಸಲಾಗುವುದು. ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೇ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರಗಳೊಳಗೆ ಚಂಡಮಾರುತ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು. ಏಕದಳ/ದ್ವಿದಳ ಧಾನ್ಯಗಳಿಗೆ ವಿಮಾ ಮೊತ್ತದ ಶೇ.2. ರಷ್ಟು ಹಾಗೂ ವಾಣಿಜ್ಯ ಬೆಳೆಗಳಿಗೆ ಶೇ.5 ರಷ್ಟು ವಿಮಾ ಕಂತನ್ನು ರೈತರು ಪಾವತಿಸಬೇಕಾಗಿರುತ್ತದೆ. ರೈತರು ಬೆಳೆ ವಿಮೆ ನೊಂದಾಯಿಸಲು 2020 ನೇ ಸಾಲಿನಲ್ಲಿ ತೊಗರಿ (ಮಳೆಆಶ್ರಿತ) ಜುಲೈ15, ತೊಗರಿ (ನೀರಾವರಿ) ಜುಲೈ15, ಮತ್ತು ಟೊಮೊಟೊ ಜುಲೈ15, ನೆಲಗಡಲೆ (ಮಳೆ ಆಶ್ರಿತ) ಜುಲೈ31ರಾಗಿ (ಮಳೆ ಆಶ್ರಿತ) ಆಗಸ್ಟ್14, ರಾಗಿ (ನೀರಾವರಿ) ಆಗಸ್ಟ್14, ಭತ್ತ (ನೀರಾವರಿ) ಆಗಸ್ಟ್14, ಮುಸುಕಿನ ಜೋಳ (ನೀರಾವರಿ) ಆಗಸ್ಟ್14, ಮುಸುಕಿನ ಜೋಳ (ಮಳೆ ಆಶ್ರಿತ) ಆಗಸ್ಟ್14, ಹುರುಳಿ (ಮಳೆ ಆಶ್ರಿತ) ಆಗಸ್ಟ್14, 2020, ರಂದು ಕೊನೆಯ ದಿನಾಂಕವಾಗಿರುತ್ತದೆ. ಹೆಚಿನ ಮಾಹಿತಿಗೆ ರೈತರು ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಅಧಿಕಾರಿಗಳನ್ನು ಅಥವಾ ಆಯಾ ತಾಲ್ಲೂಕಿನಲ್ಲಿರುವ ವಿಮಾ ಅಧಿಕಾರಿಗಳನ್ನು ಅಥವಾ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಅವರು ಸಭೆಯಲ್ಲಿ ತಿಳಿಸಿದರು.

ಕೃಷಿ ಇಲಾಖೆ ಉಪ ನಿರ್ದೇಶಕಿ ವಿನುತಾ ಸೇರಿದಂತೆ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಉಪಸ್ಥಿತರಿದ್ದರು. ಸಭೆಯ ನಂತರ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಮಾಹಿತಿ ಕುರಿತ ಕರಪತ್ರವನ್ನು ಅಪರ ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.

ದೇವನಹಳ್ಳಿ ಎಡಿಎ ರೇವಣ್ಣಪ್ಪ,ತಾಂತ್ರಿಕ ಅಧಿಕಾರಿಗಳಾದ ರೂಪ,ರೇಣುಕಾಪ್ರಸನ್ನ,ವೆಂಕಟೇಶ್ ಮತ್ತಿತರಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!