ಬೆಂಗಳೂರು: ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ.ಕರೊನಾ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಕರೊನಾ ಸೋಂಕಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕೈಗೊಂಡಿರುವ ವಾರದ ಲಾಕ್ ಡೌನ್ ನಿರ್ಣಯಕ್ಕೆ ಟ್ವಿಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು,ಕರೊನಾ ಹೆಚ್ಚಿರುವ ಇತರೆ ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವಂತೆ ಸಲಹೆ ನೀಡಿರುವ ಜೊತೆಗೆ,ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಒತ್ತಾಯಿಸಿದ್ದಾರೆ.