ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೇಹಳ್ಳಿ ಗ್ರಾಮದ 35 ವರ್ಷದ ಯುವ ಕಾಂಗ್ರೆಸ್ ಮುಖಂಡ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಮೃತರಿಗೆ ಪತ್ನಿ, ಪುತ್ರ ಹಾಗೂ ತಂದೆ, ತಾಯಿ ಇದ್ದಾರೆ.
ಎರಡು ವಾರಗಳ ಹಿಂದೆಯಷ್ಟೇ ಕ್ಯಾನ್ಸರ್ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಇವರಿಗೆ ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಇವರೊಂದಿಗೆ ಒಡನಾಟ ಹೊಂದಿದ್ದವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು.
ಮೃತರಿಗೆ ಕರೊನಾ ಸೋಂಕು ಇದ್ದ ಹಿನ್ನೆಲೆಯಲ್ಲಿ ಮೃತರ ಅಂತ್ಯೆ ಕ್ರಿಯೆ ಬುಧವಾರ ಬೆಂಗಳೂರಿನಲ್ಲೇ ಸರ್ಕಾರದ ನಿಯಮಾನುಸಾರ ನಡೆಯಲಿದೆ.ಅಂತ್ಯಕ್ರಿಯೆಯಲ್ಲಿ ಕುಟುಂಬದ ಮೂರು ಜನ ಸದಸ್ಯರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.