ದೊಡ್ಡಬಳ್ಳಾಪುರ: 2019/20ನೇ ಸಾಲಿನ ಸಿಬಿಎಸ್ ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟವಾಗಿದ್ದು,ನಗರದ ಶ್ರೀ ದೇವರಾಜ್ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಗೆ ಶೇ.99 ಫಲಿತಾಂಶ ದೊರೆತಿದೆ.
ಪರೀಕ್ಷೆ ಬರೆದ ಶಾಲೆಯ 113 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಶೇ.80ಕ್ಕು ಹೆಚ್ಚು ಅಂಕಗಳನ್ನು ಗಳಿಸಿದ್ದರೆ,46 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆಂದು ಪ್ರಾಂಶುಪಾಲರಾದ ದೇವಿಕರಾಣಿ ಹರಿತಲೇಖನಿಗೆ ತಿಳಿಸಿದ್ದಾರೆ.
ಶಾಲೆಗೆ ಉತ್ತಮ ಫಲಿತಾಂಶ ದೊರಕಿಸಿದ ವಿಧ್ಯಾರ್ಥಿಗಳನ್ನು ಆರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜಿ.ಹೆಚ್.ನಾಗರಾಜ್,ನಿರ್ದೇಶಕ ಜೆ.ರಾಜೇಂದ್ರ,ಶಾಲೆಯ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.