ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 16 ರಂದು) 31 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರದಿ ತಿಳಿಸಿದೆ.
ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ 9,ಹೊಸಕೋಟೆ ತಾಲ್ಲೂಕಿನಲ್ಲಿ 6, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 3, ನೆಲಮಂಗಲ ತಾಲ್ಲೂಕಿನಲ್ಲಿ 12 ಹಾಗೂ ಬೆಂಗಳೂರು ನಗರ ಜಿಲ್ಲೆಯ 1 ಪ್ರಕರಣ ವರದಿಯಾಗಿದೆ.
ಆದರೆ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ 40 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದ್ದರೆ.ಜಿಲ್ಲಾ ವರದಿಯಲ್ಲಿ ತಾರುಮೇರಾಗಿದೆ..