ದೊಡ್ಡಬಳ್ಳಾಪುರ: ನಗರದ ಸಾರ್ವಜನಿಕ ಆಸ್ಪತ್ರೆಯ ನಾಲ್ವರು ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದ ಹಿನ್ನೆಲೆ. ಆಸ್ಪತ್ರೆ ಸೀಲ್ಡೌನ್ ಮಾಡಲಾಗುತ್ತದೆ ಎಂಬ ಆತಂಕವನ್ನು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರಮೇಶ್ ತಳ್ಳಿಹಾಕಿದ್ದಾರೆ.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ನಾಲ್ವರು ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದ್ದು,ಆಸ್ಪತ್ರೆಯನ್ನ ಸೀಲ್ಡೌನ್ ಮಾಡುವಂತೆ ಮುಖ್ಯ ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಡಾ.ರಮೇಶ್ ಸಿಬ್ಬಂದಿಯಲ್ಲಿ ಕರೊನಾ ಸೋಂಕು ದೃಢಪಟ್ಟಿದ್ದು ನಿಜವಾದರು,ಸಾರ್ವಜನಿಕರ ಚಿಕಿತ್ಸೆಗೆ ಯಾವುದೇ ತೊಂದರೆಯಿಲ್ಲ.ಸೋಂಕಿತ ಸಿಬ್ಬಂದಿಗಳು ಕೆಲಸ ಮಾಡಿದ್ದ ಕೊಠಡಿಗಳನ್ನು ಮಾತ್ರ ಔಷಧ ಸಿಂಪಡಿಸಿ ಸೀಲ್ಡೌನ್ ಮಾಡಲಾಗಿದೆ,ಉಳಿದಂತೆ ಎಲ್ಲಾ ಚಿಕಿತ್ಸೆ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ ಎಂದಿದ್ದಾರೆ.