ಮಂಡ್ಯ: ಕರೊನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಾಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲವೆಂದು ಸಂಸದೆ ಸುಮಲತ ಅಂಬರೀಶ್ ತಿಳಿಸಿದ್ದಾರೆ.
ಕರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಅವರು ಜನತೆಗೆ ಸಂದೇಶ ನೀಡಿದ್ದಾರೆ.ಕರೊನಾ ಸೋಂಕಿನ ವಿರುದ್ಧ ಹೋರಾಟ ಒಂದು ಯುದ್ಧ, ಕರೊನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಮುಖ್ಯವಾಗಿ, ಸೊಂಕಿತರು ಕ್ವಾರಂಟೈನ್ ಅವಧಿಯನ್ನು ಮತ್ತು ಸರ್ಕಾರದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ ಹಾಗೂ ಅದು ನಮ್ಮ ಜವಾಬ್ದಾರಿ.
ನಾನು ಕರೊನಾದಿಂದ ಗುಣಮುಖ ಆಗಿದ್ದೇನೆ ಎನ್ನುವ ಒಂದು ಸುದ್ದಿ ಹರಿದಾಡುತ್ತಿದೆ. ಆದರೆ, ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ಬಳಿಕವೇ ತಿಳಿಯುವುದು. ಸದ್ಯಕ್ಕೆ ಔಷಧಿ ಹಾಗೂ ಸುಶ್ರುಷೆ ಮುಂದುವರೆದಿದೆ.
ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ. ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಆಗುವ ಭರವಸೆ ಇದೆ.
ಕರೊನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು,ಸಾಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ. ಇದು ಒಂದು ಯುದ್ಧ, ಕರೋನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ.ಮುಖ್ಯವಾಗಿ, ಸೊಂಕಿತರು ಕ್ವಾರಂಟೈನ್ ಅವಧಿಯನ್ನು ಮತ್ತು ಸರ್ಕಾರದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ ಹಾಗೂ ಅದು ನಮ್ಮ ಜವಾಬ್ದಾರಿ.
ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ತಪ್ಪದೆ ಮುಖಕ್ಕೆ ಮಾಸ್ಕ್ ಧರಿಸುವುದನ್ನ ಮರಿಯಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ಮನವಿ ಮಾಡಿದ್ದಾರೆ.