ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ಅನ್ಯ ರಾಜ್ಯಗಳಿಗೆ ಪ್ರಯಾಣಿಸಲು ಇಚ್ಛಿಸುವ ಕಾರ್ಮಿಕರು/ವಲಸಿಗರು ತಮ್ಮ ವಿವರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಕೂಡಲೇ ಹೆಸರು ನೋಂದಾಯಿಸಿಕೊಳ್ಳುವುದು ಹಾಗೂ ಹೆಸರು ನೋಂದಾಯಿಸಿದ ಕಾರ್ಮಿಕ/ವಲಸಿಗರು ಈ ಮಸ್ಟರಿಂಗ್ ಕೇಂದ್ರಗಳಲ್ಲಿಯೇ ಉಳಿದುಕೊಳ್ಳುವುದು ಕಡ್ಡಾಯವಾಗಿದ್ದು, ಉಳಿದುಕೊಳ್ಳಲು ಉಚಿತ ವ್ಯವಸ್ಥೆ ಮಾಡಲಾಗಿರುತ್ತದೆ. ಉಚಿತ ಊಟದ ವ್ಯವಸ್ಥೆ ಹಾಗೂ ವೈದ್ಯಕೀಯ ತಪಾಸಣೆ ನಡೆಸಲಾಗುವುದಲ್ಲದೆ, ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ನೆರವಾಗುವಂತೆ ಅವರುಗಳನ್ನು ಶ್ರಮಿಕ್ ರೈಲ್ವೇ ಸ್ಟೇಷನ್‍ಗೆ ತಲುಪಿಸಲು ಸಾರಿಗೆ ವ್ಯವಸ್ಥೆಯನ್ನೂ ಉಚಿತವಾಗಿ ಮಾಡಲಾಗುವುದು.
ಮಸ್ಟರಿಂಗ್ ಕೇಂದ್ರಗಳಲ್ಲಿ ಹೆಸರು ನೋಂದಾವಣೆಗೆಂದು ಮೇಲ್ವಿಚಾರಕರನ್ನಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮಂಜುನಾಥ್ (ಮೊ.ಸಂ:8660385483), ದೇವನಹಳ್ಳಿ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ರಂಗಪ್ಪ (ಮೊ.ಸಂ:8892372879), ನೆಲಮಂಗಲ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ರವಿ (ಮೊ.ಸಂ:9844232576), ಹೊಸಕೋಟೆ ತಾಲ್ಲೂಕಿನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮುನಿಕೃಷ್ಣಪ್ಪ (ಮೊ.ಸಂ:7259956791) ಅವರನ್ನು ನೇಮಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ನೋಡಲ್ ಅಧಿಕಾರಿಯಾದ ಯಶಸ್ವಿನಿ (ಮೊ.ಸಂ.:9481389269) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.