ನಿಂದನೆಗೆ ಮನನೊಂದು ನೇಣಿಗೆ ಶರಣಾದ ಕೋವಿಡ್-19 ದೃಢಪಟ್ಟಿದ್ದ ಕುಟುಂಬದ ಸದಸ್ಯ..!

ದೊಡ್ಡಬಳ್ಳಾಪುರ: ಮಗನಿಗೆ ಕೋವಿಡ್-19 ದೃಢ ಪಟ್ಟು ಆಸ್ಪತ್ರೆಯಲ್ಲಿದ್ದರು ಸಹ ಅಕ್ಕಪಕ್ಕದವರು ನಿಂಧಿಸಿದ್ದರಿಂದ ಮನನೊಂದ ನಗರದ ಖಾಸ್ ಬಾಗ್ ನಿವಾಸಿ ನಾಗರಾಜ್(52) ಮಂಗಳವಾರ ಮರಕ್ಕೆ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ.        

ಮೃತರ ಮಗಳು ಎಚ್.ಎನ್.ಆಶಾ ನಗರ ಪೊಲೀಸ್ ಠಾಣೆಗೆ ನೀಡುವ ದೂರಿನಲ್ಲಿ,ಖಾಸ್ ಬಾಗ್ ವಾರ್ಡ್ನ ಮುಖಂಡರಾದ ಮುದ್ದಪ್ಪ, ಹನುಮಂತರಾಯಪ್ಪ ಅವರು ನಮ್ಮ ತಂದೆಯ ಮೊಬೈಲ್ಗೆ ಕರೆ ಮಾಡಿ ಇಲ್ಲಿಂದ ಮನೆ ಖಾಲಿಮಾಡಿಕೊಂಡು ಹೋಗಬೇಕು.ನೀವುಗಳು ಇಲ್ಲಿಯೇ ಇದ್ದರೆ ಇತರರಿಗು ಕರೊನಾ ಸೋಂಕು ಹರಡುತ್ತದೆ ಎಂದು ಅವಾಚ್ಚವಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ನಮ್ಮ ತಂದೆಗೆ ಯಾವುದೇ ರೀತಿಯ ಕರೊನಾ ಸೋಂಕು ಇರಲಿಲ್ಲ. ಆದರೆ ನಮ್ಮ ಅಣ್ಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರಿಂದ ಆತನಿಗೆ ಕೋವಿಡ್-19 ದೃಢಪಟ್ಟಿತ್ತು.ಇದನ್ನೇ ನೆಪ ಮಾಡಿಕೊಂಡು ನಿಂದಿಸಿ ಮನೆ ಖಾಲಿಮಾಡಿಕೊಂಡು ಇಲ್ಲಿಂದ ಬೇರೆ ಕಡೆಗೆ ಹೋಗುವಂತೆ ಒತ್ತಡ ಹೇರಿದ್ದರಿಂದ ಮಾನಸಿಕವಾಗಿ ನೊಂದಿದ್ದರು.

ಸೋಮವಾರ ಮನೆಯಿಂದ ಹೊರ ಹೋದವರು ಹೆಸರಘಟ್ಟ ಸಮೀಪದ ಕೆರೆ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸ್ವತಹ ನಮ್ಮ ತಂದೆಯವರು ನನಗೆ ಕರೆ ಮಾಡಿದ ಸಂದರ್ಭದಲ್ಲಿ ಹೇಳಿದ್ದಾರೆ. ನಮ್ಮ ತಂದೆಯವರೊಂದಿಗೆ ನಡೆದಿರುವ ಸಂಭಾಷಣೆಯ ಧ್ವನಿ ಮುದ್ರಣವು ಸಹ ಇದೆ. ಹೀಗಾಗಿ ಹನುಮಂತರಾಯಪ್ಪ, ಮುದ್ದಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮುದ್ದಪ್ಪ ಸ್ಪಷ್ಟನೆ 

ನಾಗರಾಜ್ ಅವರ ಮಗನಿಗೆ ಕರೊನಾ ಸೋಂಕು ದೃಢ ಪಟ್ಟ ನಂತರ ಖಾಸ್ಬಾಗ್ ಪ್ರದೇಶದಲ್ಲಿ ನಗರಸಭೆ ಸಿಬ್ಬಂದಿಗೆ ಹೇಳಿ ಔಷಧಿ ಸಿಂಪರಣೆ ಮಾಡಿಸಿದ್ದೇವೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಿಸಿದ್ದೇನೆ.ನಾಗರಾಜ್ ಅವರ ಮನೆಯವರಿಗೆ ಯಾರು ಸಹ ಹೊರಗೆ ಬರಬೇಡಿ. ನಿಮಗೆ ಅಗತ್ಯ ಇರುವ ವಸ್ತುಗಳನ್ನು ಕೊಡಿಸುವುದಾಗಿಯು ಹೇಳಿದ್ದೇವೆ. ಕೋವಿಡ್-19 ಲಾಕ್‌ಡೌನ್‌ ಆರಂಭವಾದಾಗಿನಿಂದಲು ನಗರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಜನರಿಗೆ ದಿನಸಿ ಕಿಟ್ಗಳನ್ನು ವಯಕ್ತಿಕವಾಗಿ ಹಾಗೂ ಬಿಜೆಪಿ ಪಕ್ಷದ ವತಿಯಿಂದಲು ಹಂಚಿದ್ದೇವೆ.ಇಷ್ಟೆಲ್ಲಾ ಸೇವೆ ಮಾಡಿಯು ಸಹ ಪೊಲೀಸ್ ಠಾಣೆಗೆ ನಮ್ಮ ವಿರುದ್ಧ ಇಲ್ಲ ಸಲ್ಲದ ದೂರು ನೀಡಲಾಗಿದೆ. ಪೊಲೀಸರು ಸತ್ಯ ಯಾವುದು ಎನ್ನುವುದನ್ನು ತನಿಖೆ ನಡೆಸಲಿ.ನಾಗರಾಜ್ ಅವರ ಕುಟುಂಬದವರು ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವು ಇಲ್ಲ ಎಂದು ಮುದ್ದಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]