ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ನೂರರಷ್ಟು ಗುರಿ ಸಾಧಿಸಬೇಕು: ಡಾ. ಉಮೇಶ್ ಜಾಧವ್

ಕಲಬುರಗಿ: ಬ್ಯಾಂಕ್‍ಗಳ ಮೂಲಕ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಯೋಜನೆಗಳನ್ನು ಶೇಕಡ 100 ರಷ್ಟು ಗುರಿ ಸಾಧಿಸಲು ಶ್ರಮಿಸಬೇಕೆಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಬ್ಯಾಂಕರ್‍ಗಳಿಗೆ ಸೂಚಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಬ್ಯಾಂಕರ್‍ಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.

ಸೂಕ್ಷ್ಮ, ಸಣ್ಣ ಹಾಗೂ ಮಾಧ್ಯಮ ಕೈಗಾರಿಕೆಗಳ ಸಂಬಂಧಿಸಿದ ಸಾಲ ಸೇರಿದಂತೆ ಇನ್ನಿತರ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ನಿಗದಿತ ಗುರಿ ಸಾಧಿಸಬೇಕು ಎಂದು ಒತ್ತಿ ಹೇಳಿದರು.

ಬ್ಯಾಂಕಿಗೆ ಬರುವ ಗ್ರಾಹಕರ ಜೊತೆ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಹಾಗೆಯೇ ಸಾಲ ಮತ್ತಿತರವುಗಳಿಗೆ ಅರ್ಜಿ ಸಲ್ಲಿಸಿದವರನ್ನು ವಿನಾಕಾರಣ ಅಲೆದಾಡಿಸಬಾರು. ಅರ್ಜಿದಾರರು ಸಾಲಕ್ಕಾಗಿ ಅರ್ಜಿ ಸಲ್ಲಿಸಿದ 15 ದಿನದೊಳಗಾಗಿ ಸಾಲ ನೀಡಬೇಕು ಎಂದ ಅವರು, ಮುದ್ರಾ  ಯೋಜನೆ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ ಗರಿಷ್ಠ ಮಟ್ಟದಲ್ಲಿ ಸಾಲ ವಿತರಿಸಬೇಕು ಎಂದರು.

 ಬ್ಯಾಂಕ್‍ಗಳು ಶೈಕ್ಷಣಿಕ ಸಾಲಕ್ಕೆ ಮೊದಲು ಆದ್ಯತೆ ನೀಡುವುದರ ಮೂಲಕ ಶಿಕ್ಷಣಕ್ಕೆ ಪೆÇ್ರೀತ್ಸಾಹ ನೀಡಬೇಕು ಎಂದು ಸಂಸದ ಡಾ.ಉಮೇಶ್ ಜಾಧವ ಹೇಳಿದರು.

ಬ್ಯಾಂಕಿನ ಯಾವುದಾದರೂ ಸ್ಕೀಂಗಳ ಮೂಲಕ ಪುನ: ಸುಸ್ತಿದಾರರ ನೆರವಿಗೆ ಬರಬೇಕು ಎಂದು ಅವರು ಸಲಹೆ ನೀಡಿದರು. 

ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಸಂಬಂಧ ಯಾವುದೇ ಬ್ಯಾಂಕಿಗಾಗಲೀ ಅಥವಾ ಯಾವುದೇ ಇಲಾಖೆಗಾಗಲೀ ಸಮಸ್ಯೆ ಇದ್ದರೆ ತಿಳಿಸಿದಲ್ಲಿ ಪರಿಹರಿಸಲು ಪ್ರಯತ್ನಿಸುವುದಾಗಿ ಎಂದು ಅವರು ವಾಗ್ದಾನ ಮಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಾ.ಪಿ.ರಾಜಾ ಮಾತನಾಡಿ, ಸರ್ಕಾರದ ಯೋಜನೆಗಳ ಸಂಬಂಧ ಬರುವ ಅರ್ಜಿಗಳ ಇತ್ಯರ್ಥ ಕಾರಣ ಇಲ್ಲದೆ ವಿಳಂಬ ಮಾಡಬಾರದು. ಒಂದು ವೇಳೆ ಪೆಂಡಿಂಗ್ ಇಟ್ಟಲ್ಲಿ ಕಾರಣ ನೀಡಬೇಕು ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಇಂತಿಸಾರ್ ಹುಸೇನ್, ನಬಾರ್ಡ್ ಬ್ಯಾಂಕಿನ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕರಾದ ರಮೇಶ್ ಭಟ್ ಇದ್ದರು.

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮರದಲ್ಲಿ ನೇತಾಡುತ್ತಿದ್ದ ಮಾನವ ಬುರುಡೆಯ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಮರದಲ್ಲಿ ನೇತಾಡುತ್ತಿದ್ದ ಮಾನವ ಬುರುಡೆಯ ಗುರುತು ಪತ್ತೆ..!

ಕಳೆದ 6 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವನ ಬುರುಡೆ ಮರದಲ್ಲಿ ನೇತಾಡುವ ಸ್ಥಿತಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ (Doddaballapura) ನಗರದ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಬೆಳಕಿಗೆ ಬಂದಿದೆ.

[ccc_my_favorite_select_button post_id="119580"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!