ದೊಡ್ಡಬಳ್ಳಾಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ 2020-21 ನೇ ಸಾಲಿಗೆ ದೊಡ್ಡಬಳ್ಳಾಪುರ ತಾಲ್ಲೂಕು, ಮುತ್ತೂರು ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆಯಲ್ಲಿ 6, 7, 8, 9ನೇ ತರಗತಿಗೆ (ಆಂಗ್ಲ ಮಾಧ್ಯಮ) ಪ್ರವೇಶ ಪಡೆಯಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸದರಿ ಶಾಲೆಗಳಲ್ಲಿ ತರಗತಿವಾರು 60 ಸಂಖ್ಯಾಬಲ ಇದ್ದು, ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಮತ್ತು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಶೇ.25%ರಷ್ಟು ಸ್ಥಾನವನ್ನು ಮೀಸಲಿರಿಸಿದೆ.ವಿದ್ಯಾರ್ಥಿಗಳಿಗೆ ಪ್ರವೇಶವು ಉಚಿತವಾಗಿದ್ದು, ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಮಧ್ಯಾಹ್ನದ ಊಟ, ಪಠ್ಯಪುಸ್ತಕ, ಸಮವಸ್ತ್ರ, ಲೇಖನ ಸಾಮಗ್ರಿ ಸೇರಿದಂತೆ ಕಂಪ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110, ದೂ.ಸಂ.: 080-29787455, 9482486164, 9741777995 ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆ. ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು, ದೂ.ಸಂ.: 8310397004, 9986417499 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ. ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣ, ತಾಲ್ಲೂಕು ಕಛೇರಿ ರಸ್ತೆ, ದೊಡ್ಡಬಳ್ಳಾಪುರ ಟೌನ್-561203, ದೂ.ಸಂ.: 080-27627444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.