ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 25 ರಂದು) 154 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ನೆಲಮಂಗಲ ತಾಲ್ಲೂಕಿನಲ್ಲಿ 51, ಹೊಸಕೋಟೆ ತಾಲ್ಲೂಕಿನಲ್ಲಿ 38, ದೇವನಹಳ್ಳಿ ತಾಲ್ಲೂಕಿನಲ್ಲಿ 17 ಹಾಗೂ ಬೆಂಗಳೂರು ನಗರ ಹಾಗೂ ಇತರೆ ಜಿಲ್ಲೆಗಳ 33 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ನೀಡಿರುವ ಅಧಿಕೃತ ಮೂಲಗಳು ತಿಳಿಸಿವೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತ ವರದಿಗೂ,ಜಿಲ್ಲಾ ವರದಿಗೂ ಗೊಂದಲ ಮುಂದುವರೆದಿರುವ ಕಾರಣ ಹರಿತಲೇಖನಿ ಜಿಲ್ಲಾ ಅಂಕಿಅಂಶಗಳನ್ನು ಪ್ರಕಟಿಸುತ್ತಿಲ್ಲ.