ಬ್ರೇಕಿಂಗ್‌: ದೊಡ್ಡಬಳ್ಳಾಪುರ ಬೆಸ್ಕಾಂ ಎಇಇ ಸುಂದರೇಶ್ ನಾಯ್ಕ್ ವರ್ಗಾವಣೆ..!

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮಾಂತರ ಬೆಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್.ಸುಂದರೇಶ್ ನಾಯ್ಕ್ ಅಚ್ಚರಿಯ ಬೆಳವಣಿಗೆಯಲ್ಲಿ ಕೆ.ಆರ್.ಪುರಂಗೆ ವರ್ಗಾವಣೆಯಾಗಿದ್ದಾರೆ.

ದೊಡ್ಡಬಳ್ಳಾಪುರ ನಗರ ಉಪ ವಿಭಾಗದಲ್ಲಿ ಸುಮಾರು ನಾಲ್ಕು ವರ್ಷ.ಹಾಗೂ,ಗ್ರಾಮಾಂತರ ವಿಭಾಗದಲ್ಲಿ ಆರು ತಿಂಗಳು ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಉತ್ಸಾಹಿ ಅಧಿಕಾರಿಯಾಗಿದ್ದ ಆರ್.ಸುಂದರೇಶ್ ನಾಯಕ್ ಬೆಸ್ಕಾಂ ಇಲಾಖೆಯಲ್ಲಿನ ಸಮಸ್ಯೆಗಳನ್ನು ಸಾಧ್ಯವಾದಷ್ಟು ನೀಗಿಸಲು ಶ್ರಮಪಟ್ಟಿದ್ದರು.

ಇವರ ಅವಧಿಯಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಹಾಗೂ ಗ್ರಾಹಕರ ಸ್ನೇಹಿಯಾಗಿರಲು ದೊಡ್ಡಬಳ್ಳಾಪುರ ಉಪವಿಭಾಗವನ್ನು ಎರಡು ಉಪವಿಭಾಗವಾಗಿ ಬೇರ್ಪಡಿಸಿ,ಗ್ರಾಮೀಣ ಮತ್ತು ನಗರ ಉಪ ವಿಭಾಗವಾಗಿ ಮಾಡಿದ್ದರು.

ತಾಲೂಕಿನಲ್ಲಿ 5 ಶಾಖೆಗಳನ್ನು 8 ಶಾಖೆಗಳಾಗಿ ಹೆಚ್ಚಿಸಿ ನಮ್ಮ ತಾಲ್ಲೂಕಿನ ರೈತರಿಗೆ ಅನುಕೂಲವಾಗುವಂತೆ ಹೆಚ್ಚುವರಿ ವಿದ್ಯುತ್ ಮಾರ್ಗದಾಳುಗಳನ್ನು ನೇಮಿಸಿದ್ದರು ಸಹ ಸಾಧ್ಯವಾದಷ್ಟು ವೋಲ್ಟೇಜ್ ತೊಂದರೆ ಆಗದಂತೆ ನೋಡಿಕೊಂಡಿದ್ದರು.

ತಾಲೂಕಿನಲ್ಲಿ ಕುಡಿಯುವ ನೀರಿನ ಬವಣೆಯನ್ನು ಹೋಗಲಾಡಿಸಲು ಎಲ್ಲಾ ಕುಡಿಯುವ ನೀರಿನ ಸ್ಥಾವರಗಳಿಗೆ ನಿರಂತರ ವಿದ್ಯುತ್ ಪೂರೈಕೆ, ಮಾತ್ರವಲ್ಲದೆ ಎಲ್ಲಾ ಹಳ್ಳಿಗಳಿಗೂ ಸಹ ನಿರಂತರ ವಿದ್ಯುತ್ ಸಂಪರ್ಕ ನೀಡಲಾಗಿದೆ.

ಗಂಗಾಕಲ್ಯಾಣ ಮತ್ತು ಕುಡಿಯುವ ನೀರಿನ ಸ್ಥಾವರಗಳಿಗೆ ಮೊದಲ ಆದ್ಯತೆ ನೀಡಿ ಬಹುತೇಕ ಎಲ್ಲಾ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗಿದೆ.ರೈತರಿಗೆ ಅನುಕೂಲವಾಗಲೆಂದು ಹೆಚ್ಚುವರಿ ಮತ್ತು ಅಕ್ರಮ ಸಕ್ರಮ ಯೋಜನೆಯಡಿಗಳಲ್ಲಿ ಸುಮಾರು 500ಕ್ಕೂ ಹೆಚ್ಚಿನ  ಪರಿವರ್ತಕಗಳನ್ನು  ಅಳವಡಿಸಲಾಗಿದೆ.ಮಾತ್ರವಲ್ಲದೆ  HVDS ಯೋಜನೆಯಡಿಯಲ್ಲಿ ಸುಮಾರು 4000ಕ್ಕೂ ಹೆಚ್ಚು ಪರಿವರ್ತಕ ಅಳವಡಿಸಲು ಪ್ರಸ್ಥಾವನೆಯನ್ನು ಸಲ್ಲಿಸಲಾಗಿದೆ.

ಮೊದಲ ಹಂತದಲ್ಲಿ ಮಾಡೆಲ್ ವಿಲೇಜ್ ಯೋಜನೆಯಡಿಯಲ್ಲಿ ಒಟ್ಟು 6 ಗ್ರಾಮ ಗಳನ್ನು ಆಯ್ಕೆ ಮಾಡಿ.ಹಳೆಯ ವಿದ್ಯುತ್ ಮಾರ್ಗದಾಳುಗಳನ್ನು ದುರಸ್ಥಿಗೊಳಿಸಿ ವಿದ್ಯುತ್ ಸಂಬಂಧಿತ ಎಲ್ಲಾ ದೂರುಗಳನ್ನು ಸರಿಪಡಿಸಲಾಗಿದೆ.ಬೆಸ್ಕಾಂ ಉಪವಿಭಾಗಕ್ಕಾಗಿ ಎಪಿಎಸಿ ಮುಂಭಾಗ  ಸ್ವಂತ ಕಟ್ಟಡ ನಿರ್ಮಿಸಲಾಗಿದೆ.ಎಲ್ಲಾ ರೈತರು,ಪವರ್ ಲೂಮ್ ಗ್ರಾಹಕರು, ಹಾಗೂ ತಾಲೂಕಿನ ಎಲ್ಲಾ ಗ್ರಾಹಕರಿಗೆ ಸ್ಪಂದಿಸಿ ಸೌಹಾರ್ದಿತವಾಗಿ ಇಲಾಖೆಗೆ ಸಂಬಂಧಿಸಿದ ಎಲ್ಲಾ ದೂರುಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಇವರದ್ದು.ಪವರ್ ಮ್ಯಾನ್ ಗಳಿಗೆ ಸುರಕ್ಷಿತ ಸಾಮಗ್ರಿಗಳನ್ನು ಒದಗಿಸಿ ಯಾವುದೇ ಮೇಜರ್ ಅಪಘಾತವಾಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿದ್ದರು.

ಉತ್ತಮ ಕಾರ್ಯಕ್ಕೆ ಪ್ರಶಸ್ತಿ 

2018-19ನೇ ಸಾಲಿನಲ್ಲಿ ಉಪವಿಭಾಗದ ಇವರ ಉತ್ತಮ ಕೆಲಸಗಳನ್ನು ಗುರುತಿಸಿ ಅಂದಿನ ಬೆಸ್ಕಾಂ ಇಲಾಖೆಯ ನಿರ್ದೇಶಕಿ ಶಿಖಾ ಅವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದರು. 

ದೊಡ್ಡಬಳ್ಳಾಪುರದಲ್ಲಿ ಕರ್ತವ್ಯ ಜೀವನದ ಅಮೂಲ್ಯ ಘಟ್ಟ: ಸುಂದ್ರೇಶ್ ನಾಯಕ್

ದೊಡ್ಡಬಳ್ಳಾಪುರ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದು ನನ್ನ ಜೀವನದ ಅತೀ ಅಮೂಲ್ಯ ಘಟ್ಟವೆಂದೇ ಪರಿಗಣಿಸುತ್ತೇನೆ. ಇವೆಲ್ಲವನ್ನೂ ಸಾಧಿಸಲು ನನ್ನ ಇಲಾಖೆ, ನನ್ನ ಮೇಲಧಿಕಾರಿಗಳು, ಕಚೇರಿಯ ಎಲ್ಲಾ ಸಿಬ್ಬಂದಿಗಳು, ಶಾಖಾಧಿಕಾರಿಗಳು, ಪವರ್ ಮ್ಯಾನ್ಗಳು ಮತ್ತು ಜಿವಿಪಿಗಳು ಹಾಗೂ ಮುಖ್ಯವಾಗಿ ತಾಲೂಕಿನ ಜನತೆಯ ಸಹಕಾರ ಮತ್ತು ನಿಮ್ಮ ಪ್ರೋತ್ಸಾಹದಿಂದ ಈ ನನ್ನ ನಾಲ್ಕು ವರ್ಷದ ಪಯಣವನ್ನು ಅವಿಸ್ಮರಣೀಯ  ಆಗಿಸಿದೆ ಎಂದು ಹರಿತಲೇಖನಿ ಮೂಲಕ ಸುಂದರೇಶ್ ನಾಯಕ್ ತಾಲೂಕಿನ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಧಿಕಾರಿಗಳ ಅವಧಿಯಲ್ಲಿ ಕೈಗೊಳ್ಳಲಾದ ಕ್ರಮಗಳು ಶಾಶ್ವತವಾಗಿ ಉಳಿಯುತ್ತವೆ. ಎಂಬುದಕ್ಕೆ ಸುಂದರೇಶ್ ನಾಯಕ್ ಅವರ ಕಾರ್ಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಾಕ್ಷಿಯಾಗಿರಲಿದೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: 45 ಮಂದಿ ನಾಮಪತ್ರ

ದೊಡ್ಡಬಳ್ಳಾಪುರ TAPMCS ಚುನಾವಣೆ: 45 ಮಂದಿ ನಾಮಪತ್ರ

ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶನಿವಾರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ತಾಲೂಕು ಕಚೇರಿಯಿಂದ ಮೆರವಣಿಗೆ ನಡೆಸುವ ಮೂಲಕ ನಾಮಪತ್ರ ಸಲ್ಲಿಸಿದರು.

[ccc_my_favorite_select_button post_id="115338"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!