ಬೆಂಗಳೂರು: ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ ಮೂಲಕ ಒತ್ತಾಯಿಸಿದ್ದಾರೆ.
ಕೆರೆ ಕಾಮೇಗೌಡರನ್ನು ಮನ್ ಕಿ ಬಾತ್ ನಲ್ಲಿ ಕೂಡ ಪ್ರಧಾನಿಯವರು ಕೊಂಡಾಡಿದ್ದಾರೆ. ಮುಖ್ಯಮಂತ್ರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು. ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕಿದೆ ಎಂದಿದ್ದಾರೆ.