ಬೆಂಗಳೂರು: ಕೆರೆ ಕಾಮೇಗೌಡರ ಅನಾರೋಗ್ಯದ ಕುರಿತು,ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಒಡಗಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು,ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದು ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಒಡಗಿಸಬೇಕೆಂದು ಸೂಚನೆ ನೀಡಿದ್ದೇನೆ. ಇಡೀ ದೇಶಕ್ಕೆ ಸ್ಪೂರ್ತಿಯಾಗಿರುವ ಕಾಮೇಗೌಡರು ಶೀಘ್ರವಾಗಿ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕೆರೆ ಕಾಮೇಗೌಡರಿಗೆ ಪ್ರಶಂಸೆ ನೀಡಿದರೆ ಸಾಲದು,ಅವರ ಅನಾರೋಗ್ಯದ ವೇಳೆ ತ್ವರಿತವಾಗಿ ಚಿಕಿತ್ಸೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದರು.
ಮತ್ತೊಂದೆಡೆ ಸಂಸದೆ ಸುಮಲತ ಅಂಬರೀಶ್ ಟ್ವಿಟ್ ಮಾಡಿ.ಇಡೀ ದೇಶಕ್ಕೆ ಮಾದರಿಯಾಗಿ ಅವರ ನಿಸ್ವಾರ್ಥ ಕೆಲಸಕ್ಕೆ ಮೆಚ್ಚಿ, ಸ್ವತಃ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರೆ ಕೊಂಡಾಡಿದ ನಮ್ಮ ಮಂಡ್ಯದ ಹೆಮ್ಮೆ ಶ್ರೀ ಕಾಮೇಗೌಡ ಅವರು ಕರೋನಾ ಸೋಂಕಿನಿಂದ ಬೇಗನೆ ಸಂಪೂರ್ಣ ಗುಣಮುಖರಾಗಲೆಂದು ಪ್ರಾರ್ಥಿಸುವೆ ಮತ್ತೆ ಆರೋಗ್ಯದಿಂದ ಅವರ ಸಾರ್ಥಕ ಜೀವನ ಹೀಗೆಯೇ ನೂರು ಕಾಲ ಸಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.