ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು138 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 20, ಹೊಸಕೋಟೆ ತಾಲ್ಲೂಕಿನಲ್ಲಿ 4, ದೇವನಹಳ್ಳಿ ತಾಲ್ಲೂಕಿನಲ್ಲಿ 40 ಹಾಗೂ ಬೆಂಗಳೂರು ನಗರ ಹಾಗೂ ಇತರೆ ಜಿಲ್ಲೆಗಳ 39 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಕೋವಿಡ್ ಸೋಂಕಿತ ವ್ಯಕ್ತಿ ಸಾವು
ಹೊಸಕೋಟೆ ನಗರದ ನಿವಾಸಿಯಾದ 36 ವರ್ಷದ ವ್ಯಕ್ತಿ (ಪಿ-52,600), ಜುಲೈ 26 ರಂದು ಹೊಸಕೋಟೆಯ ನಿಗದಿತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜ್ವರ, ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯು, ಜುಲೈ 14 ರಂದು ಚಿಕಿತ್ಸೆ ಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಉಳಿದಂತೆ ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವರದಿಗೂ ಜಿಲ್ಲಾಡಳಿತದ ವರದಿಗೂ ಗೊಂದಲ ಮುಂದುವರೆದಿದ್ದು, ಜಿಲ್ಲಾಡಳಿತ ನೀಡಿರುವ ದೊಡ್ಡಬಳ್ಳಾಪುರದ ವರದಿಯನ್ನು ಹರಿತಲೇಖನಿ ಪ್ರಕಟಿಸುತ್ತಿಲ್ಲ.
 
				 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						