ಜು.30 ಮತ್ತು 31 ರಂದು ಸಿಇಟಿ ಪರೀಕ್ಷೆ / ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರು ಸಿಇಟಿ ಪರೀಕ್ಷಾ ಕೇಂದ್ರಗಳು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)  ನಡೆಯಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ  ಜು.30 ಮತ್ತು 31 ರಂದು ನಡೆಯುವ  ಸಾಮಾನ್ಯ ಪರೀಕ್ಷೆಗೆ ದೊಡ್ಡಬಳ್ಳಾಪುರ,ನೆಲಮಂಗಲ ಮತ್ತು ಹೊಸಕೋಟೆ ಪರೀಕ್ಷಾ ಕೇಂದ್ರಗಳಾಗಿವೆ.ಇದುವರೆವಿಗೂ  ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮಾತ್ರ  ಸಿಇಟಿ ಪರೀಕ್ಷಾ ಕೇಂದ್ರವಿತ್ತು. ಈ ವರ್ಷ ಕೋವಿಡ್ -19 ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಾರಂಭಿಸುತ್ತಿದೆ.

ಇದರಿಂದಾಗಿ ಜಿಲ್ಲೆಯ ನೆಲಮಂಗಲ ಮತ್ತು ಹೊಸಕೋಟೆಗೆ ಹೆಚ್ಚುವರಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಅವಕಾಶ ದೊರಕಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಕೋವಿಡ್ 19 ಹಿನ್ನೆಲೆಯಲ್ಲಿ  ವಿದ್ಯಾರ್ಥಿಗಳಿಗೆ ಸಮೀಪ ಸ್ಥಳಗಳಲ್ಲೆ ಪರೀಕ್ಷೆಗೆ ಹಾಜರಾಗಲು ಅವಕಾಶ ಮಾಡಿಕೊಡುತ್ತಿದೆ.  ಇದಕ್ಕಾಗಿ ಹೊಸದಾಗಿ  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 75 ಹೆಚ್ಚುವರಿ ಪರೀಕ್ಷಾ  ಸ್ಥಳಗಳನ್ನು ಹೊಸದಾಗಿ ಪರೀಕ್ಷಾ ಕೇಂದ್ರಗಳಾಗಿ ನಿಗದಿಪಡಿಸಿದೆ.  ಹೊಸ ಪರೀಕ್ಷಾ ಕೇಂದ್ರಗಳಲ್ಲಿ  ನೆಲಮಂಗಲ ತಾಲೂಕಿನ   ಬಸವೇಶ್ವರ ಬಾಲಕಿಯ ಪದವಿ ಪೂರ್ವ ಕಾಲೇಜು ಮತ್ತು ಹೊಸಕೋಟೆ ತಾಲೂಕಿನ ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು, ಸರಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜು ಸೇರಿವೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ  ಜು.30 ಮತ್ತು 31 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಒಟ್ಟು 2088 ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರೆ ಉಪನಿರ್ದೇಶಕ ಎಂ.ರಾಮಕೃಷ್ಣ ತಿಳಿಸಿದ್ದಾರೆ. ಅವರು ಸಾಮಾನ್ಯ ಪ್ರವೇಶ ಪರೀಕ್ಷೆಯ ಬಗ್ಗೆ ಮಾಹಿತಿ  ನೀಡಿ,  ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ದೊಡ್ಡಬಳ್ಳಾಪುರ ತಾಲೂಕಿನ ಮೂರು ಪರೀಕ್ಷಾ ಕೇಂದ್ರಗಳಲ್ಲಿ 1152 ವಿದ್ಯಾರ್ಥಿಗಳು,  ಹೊಸಕೋಟೆ ತಾಲೂಕಿನ ಎರಡು ಪರೀಕ್ಷಾ ಕೇಂದ್ರಗಳಲ್ಲಿ 528 ವಿದ್ಯಾರ್ಥಿಗಳು ಮತ್ತು  ನೆಲಮಂಗಲ ತಾಲೂಕಿನ ಒಂದು ಪರೀಕ್ಷಾ ಕೇಂದ್ರದಲ್ಲಿ 408 ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಬರೆಯಲಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ   ಪ್ರತಿ ಸಿಇಟಿ ಪರೀಕ್ಷಾ ಕೇಂದ್ರದಲ್ಲೂ  ವಿದ್ಯಾರ್ಥಿಗಳಿಗೆ ಶುಚ್ಫಿತ್ವ ಸೇರಿದಂತೆ ಹಲವು ವ್ಯವಸ್ಥೆ ಮಾಡಲಾಗಿದೆ.  ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು  ಪರೀಕ್ಷಾ ಕೇಂದ್ರ ಮುಂಭಾಗದಲ್ಲಿ ಕರ್ನಾಟಕ ಪರೀಕ್ಷಾ ಪ್ರಧಿಕಾರ ಪ್ರಕಟಿಸುತ್ತಿದೆ. ವಿದ್ಯಾರ್ಥಿಗಳಿಗೆ ಸ್ಯಾನಿಟೈಜರ್  ವ್ಯವಸ್ಥೆ ಇರುತ್ತದೆ.ವಿದ್ಯಾರ್ಥಿಗಳಿಗೆ  ಮಾಸ್ಕ್ ಧರಿಸಿ ಬರುವಂತೆ ಸೂಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ  ವೈದ್ಯಕೀಯ ನೆರವಿನ ವ್ಯವಸ್ಥೆ ಇದೆ. ಆರೋಗ್ಯ ಸಹಾಯಕರು ಪರೀಕ್ಷೆ ಪ್ರಾರಂಭದಿಂದ ಕೊನೆಯ ತನಕ  ಅಗತ್ಯ ಔಷಧ ಮತ್ತು ಪ್ರಥಮ ಚಿಕಿತ್ಸೆ  ಸಲಕರಣೆಯೊಂದಿಗೆ ಕಾರ್‍ಯನಿರ್ವಹಿಸಲಿದ್ದಾರೆ ಎಂದರು. 

ತಾಲೂಕು ಮಟ್ಟದ ಸಮಿತಿಗಳು 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ  ತಾಲೂಕುಗಳಲ್ಲಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿಗಳು ತಾಲೂಕು ಮಟ್ಟದ ಸಮಿತಿಗಳನ್ನು ರಚಿಸಿದ್ದಾರೆ.

  ಉಪವಿಭಾಗಾಧಿಕಾರಿಗಳು ಅಧ್ಯಕ್ಷರಾಗಿರುವ ತಾಲೂಕು ಸಮಿತಿಯಲ್ಲಿ ಆಯಾ ತಾಲೂಕಿನ ತಹಶೀಲ್ದಾರ್,ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ,ವೃತ್ತ ನಿರೀಕ್ಷಕ ಆರಕ್ಷಕರು,  ಸದಸ್ಯರುಗಳಾಗಿ ಮತ್ತು  ಕ್ಷೇತ್ರ ಶಿಕ್ಷಣಾಧಿಕಾರಿ ಸದಸ್ಯ ಕಾರ್ಯದರ್ಶಿ ಕಾರ್ಯನಿರ್ವಹಿಸುತ್ತಿದ್ದಾರೆ.ಮೂರು ತಾಲೂಕುಗಳ  ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು,ಲೋಕೋಪಯೋಗಿ ಇಲಾಖೆಯ  ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು  ಸಮಾಜ ಕಲ್ಯಾಣ ಇಲಾಖೆಯ  ಸಹಾಯಕ ನಿರ್ದೇಶಕರು  ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರಾಗಿರುತ್ತಾರೆ.ಅಯಾ ತಾಲೂಕಿನ  ತಹಶೀಲ್ದಾರ್,ಕ್ಷೇತ್ರಶಿಕ್ಷಣಾಧಿಕಾರಿ ಮತ್ತು ಒಬ್ಬರು ಪ್ರಾಂಶುಪಾಲರು ತ್ರಿಸದಸ್ಯ  ಸಮಿತಿಯಲ್ಲಿ  ಕಾರ್ಯನಿರ್ವಹಿಸುತ್ತಿದ್ದಾರೆ.

ಗ್ರಾಮಾಂತರ ಪ್ರದೇಶದ ಅನುಕೂಲ  

ದೊಡ್ಡಬಳ್ಳಾಪುರ, ನೆಲಮಂಲ ಮತ್ತು ಹೊಸಕೋಟೆ ತಾಲೂಕಿನ  ಸಿಇಟಿ ಪರೀಕ್ಷೆ ನಡೆಯುತ್ತಿರುವುದು  ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಕೋವಿಡ್ 19  ಪರಿಸ್ಥಿತಿಯಲ್ಲಿ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳು ಬೆಂಗಳೂರಿಗೆ ಹೋಗಿ ಸಿಇಟಿ ಪರೀಕ್ಷೆ ಬರೆಯಲು ಕಷ್ಟವಾಗುತ್ತಿತ್ತು.   ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿನ ಸಿಇಟಿ ಕೇಂದ್ರಗಳಿಗೆ ಹೋಗಲು ತುಂಬಾ ತೊಂದರೆಯಾಗುತ್ತಿತ್ತು. ಕರ್ನಾಟಕ ಪರೀಕ್ಷಾ  ಪ್ರಾಧಿಕಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದೊಡ್ಡಬಳ್ಳಾಪುರ ಪರೀಕ್ಷಾ ಕೇಂದ್ರದ ಜೊತೆಗೆ  ನೆಲಮಂಗಲ ಮತ್ತು ಹೊಸಕೋಟೆ ತಾಲೂಕಿನಲ್ಲಿ ಪರೀಕ್ಷಾ ಕೇಂದ್ರಗಳನ್ನು ಈ ವರ್ಷದಿಂದ ಆರಂಭಿಸುತ್ತಿರುವುದು ವಿದ್ಯಾರ್ಥಿಗಳಿಗೆ  ಹೆಚ್ಚಿನ ಸಹಕಾರಿ ಆಗಿದೆ. 

ದೊಡ್ಡಬಳ್ಳಾಪುರ

ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು : 648

ಶ್ರೀದೇವರಾಜ ಅರಸು ಪದವಿ ಪೂರ್ವ ಕಾಲೇಜು : 288

ಸರಕಾರಿ ಪದವಿ ಪೂರ್ವ ಕಾಲೇಜು : 216

ಹೊಸಕೋಟೆ 

ಸರಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜು : 264

ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು : 264 

ನೆಲಮಂಗಲ

ಬಸವೇಶ್ವರ ಬಾಲಕಿಯ ಪದವಿ ಪೂರ್ವ ಕಾಲೇಜು : 408

ರಾಜಕೀಯ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="115405"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!