ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ / ಕಾಂಗ್ರೆಸ್ ವಿರುದ್ಧ ಮುಗಿಬಿದ್ದ ಹೆಚ್.ಡಿ.ಕೆ

ಬೆಂಗಳೂರು: ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು CM ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ?” ಎಂದು @INCKarnataka ಟ್ವೀಟ್ ಮಾಡಿದೆ. ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್ನ ಅತಿರಥ ಮಹಾರಥರು ಪಕ್ಷದ ಟ್ವಿಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ವಿರುದ್ದ ಹರಿಹಾಯ್ದಿರುವ ಅವರು,ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ  ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್ನ ನೈತಿಕತೆ ಎಲ್ಲಿತ್ತು?

ರೈತರ ಸಾಲ ಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ.

ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ.  ಕಾಂಗ್ರೆಸ್ನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ.

ಕಳೆದ ವಿಧಾನಸಭಾ  ಚುನಾವಣೆಯಲ್ಲಿ  ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್ನ ರಾಷ್ಟ್ರ, ರಾಜ್ಯ ನಾಯಕರು ಇದ್ದ ಸಭೆಯಲ್ಲಿ ದೇವೇಗೌಡರು ಕಾಂಗ್ರೆಸ್ಗೆ ಸಲಹೆ ನೀಡಿ @kharge CM ಆಗಲಿ ಎಂದರು. ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು‌.

ಆ ನಾಯಕರುಗಳು ಯಾರ್ಯಾರೆಂದು ಕಾಂಗ್ರೆಸ್ ಹುಡುಕಿಕೊಳ್ಳಲಿ. ಆಗ ಅವರ ನೈತಿಕತೆ ಪ್ರಶ್ನೆಗೆ ಅವರದೇ ನಾಯಕರಿಂದ ಉತ್ತರ ಸಿಗಬಹುದು.

ಕುಮಾರಸ್ವಾಮಿ ಅಜ್ಞಾತ, ಅಪ್ರಸ್ತುತರಾಗಿದ್ದಾರೆ ಎಂದೂ ಕಾಂಗ್ರೆಸ್ನ ನಾಯಕರು ಪಕ್ಷದ ಟ್ವಿಟರ್ ಮೂಲಕ ದಾಳಿ ಮಾಡಿದ್ದಾರೆ. ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ? ಪ್ರತ್ಯಕ್ಷವಾಗಿ ರಾಜಕಾರಣ ಮಾಡುತ್ತಿದೆ? ಅನಾಥವಾಗಿದೆ? ಇದಕ್ಕೆ ಉತ್ತರಿಸಲು ನಾಯಕರ್ಯಾರಾದರೂ ಇದ್ದಾರೋ? ಇಲ್ಲ ಕಾಂಗ್ರೆಸ್ನ  ಟ್ವಿಟರ್ ಖಾತೆಗೆ ಸೀಮಿತವೋ?

ಬೇರೆ ಪಕ್ಷದ ಶಾಸಕರಿಗೆ ಸ್ವಯಂ ಸೇರ್ಪಡೆಯ ‘ಮಾರುವೇಶ’ ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೂ ಬಿಜೆಪಿ ಅವರು ಆಪರೇಷನ್ ಅಸ್ತ್ರ ಬಳಸಿ ಸರ್ಕಾರವೊಂದನ್ನು ಬುಡಮೇಲು ಮಾಡುವುದಕ್ಕೂ ಅಂತಹ ವ್ಯತ್ಯಾಸವೇನಿಲ್ಲ. ಒಂದು ತೆಳುಗೆರೆಯಷ್ಟೇ ಅಂತರ.

ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯವೆನಿಸಿದೆ. ಟೀಕೆಗಾಗಿ ಟೀಕೆ ಮಾಡುವ ಇಂತಹ ಮನಸ್ಥಿತಿಯಿಂದಾಗಿಯೇ ಕಾಂಗ್ರೆಸ್ ಇಂದು ಇಂತಹ ದುಃಸ್ಥಿತಿಗೆ ತಲುಪಿದೆ. ಕಪಟ ರಾಜಕಾರಣವನ್ನು ಯಾವ ಬಾಗಿಲಿನಿಂದ ಮಾಡಿದರೂ ಅದು ಅನೀತಿಯೇ ಆಗಿದೆ.

“ತನ್ನರಿದೆ ಅರಿವೆಂತುಂಟೊ?

ತನ್ನ ಮರೆದ ಮರೆಹೆಂತಂಟೊ?

ಅರೆದು ಮರೆದವರು

ನಿಮ್ಮ ಪ್ರತಿಬಿಂಬದಂತಿಪ್ಪರು ಕಾಣಾ, ಗುಹೇಶ್ವರಾ” ಎಂದು ಕುಟುಕಿದ್ದಾರೆ.

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!