ಬೆಂಗಳೂರು: ಮೈಸೂರಿನ ಜೆ.ಎಸ್.ಎಸ್.ಮಹಾವಿದ್ಯಾಪೀಠದ ವತಿಯಿಂದ ಆಯೋಜಿಸಿದ್ದ ‘ಶಿವಪದ ರತ್ನಕೋಶ’ ಗ್ರಂಥವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಆನ್ ಲೈನ್ ಮೂಲಕ ಲೋಕಾರ್ಪಣೆ ಮಾಡಿದರು.
ಈ ವೇಳೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು,ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿಗಳು, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್ ಉಪಸ್ಥಿತರಿದ್ದರು.