ಬೆಂಗಳೂರು: ನಾನು ಅಡ್ಜಸ್ಟ್ಮೆಂಟ್ ರಾಜಕಾರಣವನ್ನು ಹಿಂದೆಯೂ ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಡಿಕೆಶಿ ನಡುವಿನ ವೈಮನಸ್ಯ ಹಾಗೂ ಬಿಜೆಪಿ ಸರ್ಕಾರಕ್ಕೆ ಬಬಲ ವಿಚಾರದ ಚರ್ಚೆ ಕುರಿತಂತೆ ಟ್ವಿಟ್ ಮಾಡಿದ್ದಾರೆ
ಡಿ.ಕೆ.ಶಿವಕುಮಾರ್ ಮತ್ತು ನನ್ನ ನಡುವಣ ರಾಜಕಾರಣವೇ ಬೇರೆ. ವೈಯಕ್ತಿಕ ವಿಶ್ವಾಸವೇ ಬೇರೆ. ಹಿಂಬಾಗಿಲ ರಾಜಕಾರಣದ ಮೂಲಕ ನೆಲೆ ಕಂಡುಕೊಂಡವರಿಂದ ಯಾವುದೇ ಡ್ಯಾಮೇಜ್ ಮಾಡಲು ಸಾಧ್ಯವಿಲ್ಲ.
ಶಿವಕುಮಾರ್ ಮತ್ತು ನಮ್ಮ ನಡುವಣ ಹಿಂದಿನ ಹಾಗೂ ಇಂದಿನ ರಾಜಕಾರಣ ಬೇರೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಒಂದು ಗುರಿ ಇಟ್ಟು ಕೊಂಡೆ ದುಡಿಮೆ ಮಾಡುತ್ತಾರೆ. ಈ ಮಧ್ಯೆ ಹುಳಿ ಹಿಂಡುವವರ ನಾಟಕ ಫಲಿಸದು.ತನ್ನ ಬೇಳೆ ಬೇಯಿಸಿಕೊಳ್ಳಲು ಮಸಾಲೆ ಅರೆಯುತ್ತಿರುವ ವ್ಯಕ್ತಿಯ ಕುತಂತ್ರ ರಾಜಕಾರಣಕ್ಕೆ ರಾಮನಗರ ಜಿಲ್ಲೆಯ ಜನತೆ ಸೊಪ್ಪು ಹಾಕುವುದಿಲ್ಲ.
ನೆರೆಹಾವಳಿ, ಕರೊನ ಸಂಕಷ್ಟ ಸಮಯದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಜನತೆಯ ಹಿತಕಾಯುವ ದೃಷ್ಟಿಯಿಂದ ಸರ್ಕಾರಕ್ಕೆ ಬೆಂಬಲ ಇದೆ ಎಂದಾಕ್ಷಣ ಅದನ್ನು ತಮ್ಮ ಮೂಗಿನ ನೇರಕ್ಕೆ ವ್ಯಾಖ್ಯಾನಿಸುವ ಕೀಳು ಅಭಿರುಚಿಯ ಹೇಳಿಕೆ ನೀಡುವುದು ಯಾರಿಗೂ ಶೋಭೆ ತರುವುದಿಲ್ಲ.
ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯಾ?ತನಗಾದ ಆಗೇನು? ಅವರಿಗಾದ ಚೇಗೆಯೇನು?ತನುವಿನ ಕೋಪ ತನ್ನ ಹಿರಿಯತನದ ಕೇಡು.ಮನದ ಕೋಪ ತನ್ನ ಅರಿವಿನ ಕೇಡು.ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆನೆರೆಮನೆಯಸುಡದು,ಕೂಡಲಸಂಗಮದೇವಾ ಎಂದಿದ್ದಾರೆ.