ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 31 ರಂದು) 105 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರದಿ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 21, ಹೊಸಕೋಟೆ ತಾಲ್ಲೂಕಿನಲ್ಲಿ 28, ದೇವನಹಳ್ಳಿ ತಾಲ್ಲೂಕಿನಲ್ಲಿ 15 ಹಾಗೂ ಬೆಂಗಳೂರು ನಗರ ಹಾಗೂ ಇತರೆ ಜಿಲ್ಲೆಯ 12 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿ ಮತ್ತು ಜಿಲ್ಲಾ ವರದಿಯ ನಡುವೆ ಗೊಂದಲದ ಕಾರಣ ಹರಿತಲೇಖನಿ ಅಂಕಿಅಂಶ ಪ್ರಕಟಿಸುತ್ತಿಲ್ಲ.