ಬಿಬಿಎಂಪಿ ಕೋವಿಡ್ ವಾರ್ಡ್ ಹಂತದ ಕಣ್ಗಾವಲು ಸಮಿತಿಯಿಂದ ಬೆಂ.ಗ್ರಾ.ಜಿಲ್ಲೆಯ ಶಿಕ್ಷಕರ ಕೈ ಬಿಡಲು ಒತ್ತಾಯ

ದೊಡ್ಡಬಳ್ಳಾಪುರ: ಕರೊನಾ ಸೋಂಕು ನಿಯಂತ್ರಣ ಕುರಿತಂತೆ ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಿಕ್ಷಕರನ್ನು ಬಿ.ಬಿ.ಎಂ.ಪಿ ವ್ಯಾಪ್ತಿಗೆ ನಿಯೋಜಿಸಿರುವುದನ್ನು ವಿನಾಯಿತಿ ನೀಡಿ, ಕರ್ತವ್ಯನಿರ್ವಹಿಸುತ್ತಿರುವ ಸ್ಥಳ ಅಥವಾ ವಾಸವಿರುವ ಸ್ಥಳದ ವ್ಯಾಪ್ತಿಯಲ್ಲಿಯೇ ಕೋವಿಡ್-19 ಕರ್ತವ್ಯಕ್ಕೆ ಅನುವು ಮಾಡಿಕೊಡಬೇಕೆಂದು ಕಾರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದೊಡ್ಡಬಳ್ಳಾಪುರ ಘಟಕದಿಂದ ಶಾಸಕ ಟಿ.ವೆಂಕಟರಮಣಯ್ಯರನ್ನು ಮನವಿ ಮಾಡಲಾಯಿತು.

ಈ ವೇಳೆ ಮಾತನಾಡಿದ ಸಂಘದ ಮುಖಂಡರು,ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಿಕ್ಷಕರು ಕೋವಿಡ್-19 ಸಾಕ್ರಮಿಕ ರೋಗ ತಡೆಗಟ್ಟುವ ಸಂಬಂದ ವಿವಿಧ ಹಂತಗಳಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಕರ್ತವ್ಯನಿರ್ವಹಿಸುತ್ತಿರುವ ಸ್ಥಳ ಅಥವಾ ವಾಸವಿರುವ ಸ್ಥಳ / ತಾಲ್ಲೂಕು / ಜಿಲ್ಲಾ ವ್ಯಾಪ್ತಿಯನ್ನು ಬಿಟ್ಟು ಕೋವಿಡ್-19 “Booth level Committee”  ಗೆ ಸರಿಸುಮಾರು 70 ರಿಂದ 100 ಕಿ.ಮೀ ದೂರವಿರುವ ಬಿ.ಬಿ.ಎಂ.ಪಿ  ವ್ಯಾಪ್ತಿಗೆ ನಿಯೋಜಿಸಿರುವುದು ಶಿಕ್ಷಕರಲ್ಲಿ ತುಂಬಾ ಆತಂಕವನ್ನು ಉಂಟುಮಾಡಿರುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಶಿಕ್ಷಕರು / ವಯಸ್ಸು ಆದವರು ಇರುವುದರಿಂದ ದೂರದ ಸ್ಥಳಗಳಿಗೆ ಪ್ರಯಾಣ ಮಾಡಿ ಕರ್ತವ್ಯನಿರ್ವಹಿಸುವುದು ಕಷ್ಟವಾಗಿರುವುದರಿಂದ,ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳ ಅಥವಾ ವಾಸವಿರುವ ಸ್ಥಳದ ವ್ಯಾಪ್ತಿಯಲ್ಲಿಯೇ ಕೋವಿಡ್-19 ಕರ್ತವ್ಯಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.

ಮನವಿ ಪತ್ರ ಸ್ವೀಕರಿಸಿದ ಶಾಸಕ ಟಿ.ವೆಂಕಟರಮಣಯ್ಯ ಬಿಬಿಎಂಪಿ ಆಯುಕ್ತ ಹಾಗೂ ಬೆಂ.ಗ್ರಾ.ಜಿಲ್ಲಾಧಿಕಾರಿ ಕರೆ ಮೂಲಕ ಮಾತನಾಡಿ ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಮಾಡಿದ್ದು,ಸೋಮವಾರ ಖುದ್ದಾಗಿ ತೆರಳಿ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಕೆ.ಜಯಕುಮಾರ್,ರಾಜ್ಯಪರಿಷತ್ ಸದಸ್ಯ ಟಿ.ಕೆ.ಪ್ರಕಾಶ್.ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಸ್.ರಾಜಶೇಖರ್,ಸರ್ಕಾರಿ ನೌಕರರ ಸಂಘ ದೊಡ್ಡಬಳ್ಳಾಪುರದ ಕಾರ್ಯದರ್ಶಿ ದನಂಜಯ,ಸರ್ಕಾರಿ ನೌಕರರ ಸಂಘ ದೇವನಹಳ್ಳಿ ಕಾರ್ಯದರ್ಶಿ ಆದರ್ಶ ಸೇರಿದಂತೆ ಶಿಕ್ಷಕರಾದ ವಸಂತ್ ಗೌಡ,ಆರ್.ಶಿವಕುಮಾರ್,ನಾರಾಯಣ್, ಜ್ಯೂತಿಕುಮಾರ್ ಮತ್ತಿತರಿದ್ದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]