ಬೆಂಗಳೂರು: 36ನೇ ನಗರದ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನಿರ್ಗಮಿತ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಕರೊನಾ ಸೋಂಕಿನಿಂದ ಮೃತಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸ್ಮರಿಸಿದ ಪೊಲೀಸ್ ಆಯುಕ್ತರಾದ ಕಮಲ್ ಪಂತ್, ಇಂದು ನಾನು ಬೆಂಗಳೂರು ನಗರ ಪೊಲೀಸ್ ಆಯುಕ್ತನಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಸರ್ಕಾರ ಕೊಟ್ಟ ಈ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದಿದ್ದಾರೆ.