ಬೆಂಗಳೂರು: ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಜುಲೈ 31 ವರೆಗೆ ಘೋಷಿಸಿದ್ದ.ಶಾಲೆ,ಕಾಲೇಜುಗಳ ಬಂದ್ ಆದೇಶವನ್ನು ಆ.31ರ ವರೆಗೆ ಮುಂದೂಡಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯದ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರಶಿಕ್ಷಣಾಧಿಕಾರಿಗಳು, ಮುಖ್ಯಶಿಕ್ಷಕರುಗಳಿಗೆ ಬರೆದಿರುವ ಸುತ್ತೋಲೆಯಲ್ಲಿ ಈ ಕುರಿತು ತಿಳಿಸಲಾಗಿದೆ.
ಹರಿತಲೇಖನಿಗೆ ದೊರೆತಿರುವ ಸುತ್ತೋಲೆಯ ಮಾಹಿತಿ ಅನ್ವಯ.ಕೋವಿಡ್-19 ವೈರಸ್ ಸೋಂಕು ಹರಡುತ್ತಿರುವುದು ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ.31ರ ವರೆಗೆ ಎಲ್ಲಾ ಶಾಲೆಗಳನ್ನು ಮುಚ್ಚಿರುವಂತೆ ಅದೇಶಿಸಲಾಗಿತ್ತು.ಆದರೆ
ಉಲ್ಲೇಖ (1) ರ ಕೇಂದ್ರ ಸರ್ಕಾರದ ಆದೇಶದಂತೆ ಎಲ್ಲಾ ಶಾಲೆಗಳು,ಕಾಲೇಜುಗಳು,ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳನ್ನು ಆಗಸ್ಟ್ 31 ರವರೆಗೆ ಮುಚ್ಚುವಂತೆ ಅದೇಶಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ದಿನಾಂಕ:31-08-2020ರವರೆಗೆ ಮುಚ್ಚಿರತಕ್ಕದ್ದು ಎಂದು ಸೂಚಿಸಲಾಗಿದೆ.
ಈ ಸುತ್ತೋಲೆ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.