ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 03 ರಂದು) ಇಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ
ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಒಂದು ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾ ವರದಿ ತಿಳಿಸಿದೆ.
ಆದರೆ ಜಿಲ್ಲಾಡಳಿತ ವರದಿಗೂ,ತಾಲೂಕು ಆಡಳಿತದ ವರದಿಯ ನಡುವೆ ಗೊಂದಲ ಮತ್ತೆ ಮುಂದುವರೆದಿದ್ದು, ಪ್ರಶ್ನಿಸಬೇಕಾದವರ ಮೌನ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳನ್ನು ಉಂಟುಮಾಡಿದೆ.