ಶ್ರೀ ರಾಮ ಮಂದಿರದ ನಿರ್ಮಾಣದ ಶಿಲಾನ್ಯಾಸ ಹಬ್ಬವಾಗಿ ಆಚರಿಸಲು ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳ ಕರೆ

ದೊಡ್ಡಬಳ್ಳಾಪುರ: ಆಗಸ್ಟ್ 5 ರಂದು ಅಯೋದ್ಯೆಯಲ್ಲಿ ನಡೆಯಲಿರುವ ಶ್ರೀ ರಾಮ ಮಂದಿರದ ನಿರ್ಮಾಣದ ಶಿಲಾನ್ಯಾಸ ದಿನವನ್ನು ಮನೆ ಮನಗಳಲ್ಲಿ ಹಬ್ಬದ ವಾತಾವರಣ ನಿರ್ಮಿಸುವ ಮೂಲಕ ವಿಜಯೋತ್ಸವ ಆಚರಿಸುವಂತೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕರೆ ನೀಡಿರುವ ಹಿನ್ನಲೆಯಲ್ಲಿ ಅಂದಿನ ಆಚರಣೆಗಳ ಕುರಿತು ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳದಿಂದ ಸಮಾಜಕ್ಕೆ ತಿಳಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದು  ಭಜರಂಗ ದಳದ ತುಮಕೂರು ವಿಭಾಗದ ಸಂಚಾಲಕ ನರೇಶ್ ರೆಡ್ಡಿ  ತಿಳಿಸಿದ್ದಾರೆ.

ಆಗಸ್ಟ್ 5 ರಂದು ಶ್ರೀ ರಾಮ ಮಂದಿರ ನಿರ್ಮಾಣದ ಹಿನ್ನಲೆಯಲ್ಲಿ ಅನುಸರಿಸಬೇಕಿರುವ ಆಚರಣೆಗಳ ಕುರಿತ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಶ್ರೀ ರಾಮ ಮಂದಿರ ನಿರ್ಮಾಣದ 550 ವರ್ಷಗಳ ಕನಸು ಈಗ ನನಸಾಗುತ್ತಿದ್ದು, ಆ ಶುಭ ಗಳಿಗೆ ಸಮೀಪದಲ್ಲಿಯೇ ಇದೆ.ಈ ದಿಸೆಯಲ್ಲಿ  ಪ್ರತಿ ಮನೆಗಳಲ್ಲಿಯೂ ಹಬ್ಬದ ಸಂಭ್ರಮ ಕಾಣಬೇಕು.ಶಿಲಾನ್ಯಾಸಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲದಿರುವುದರಿಂದ ಆ.೫ರಂದು ಬೆಳಿಗ್ಗೆ 10.30ರಿಂದ ದೃಶ್ಯವಾಹಿನಿಗಳಲ್ಲಿ ಪ್ರಸಾರವಾಗುವ ನೇರ ಪ್ರಸಾರವನ್ನು ಎಲ್ಲರೂ ವೀಕ್ಷಿಸಬೇಕು. ಶ್ರೀರಾಮನನ್ನು ಸ್ಮರಿಸುವ ಮೂಲಕ ಮನೆಗಳ ಮೇಲೆ ಭಗವದ್ ಧ್ವಜ ಹಾರಿಸಿ, ಸಿಹಿ ಮಾಡಿ ಹಬ್ಬ ಆಚರಿಸಬೇಕಿದೆ ಎಂದರು.

ಭಜರಂಗ ದಳ ಹಾಗೂ ವಿಶ್ವ ಹಿಂದು ಪರಿಷತ್ ನಿಂದ 5 ಸಾವಿರ ಮನೆಗಳಿಗೆ ದೀಪಗಳು ಹಾಗೂ ಪಾಕೆಟ್ ಕ್ಯಾಲೆಂಡರ್ಗಳನ್ನು ನೀಡುವ ಮೂಲಕ ಶುಭ ಹಾರೈಸಲಾಗುತ್ತಿದೆ. ಶಿಲಾನ್ಯಾಸದ ದಿನದಂದು ದೀಪಗಳನ್ನು ಬೆಳಗುವಂತೆ ಮನವಿ ಮಾಡಲಾಗಿದೆ. ನಗರದ ನೆಲದಾಂಜನೇಯಸ್ವಾಮಿ, ಶ್ರೀ ರಾಮ ದೇವಾಲಯಗಳಿಂದ ಮೃತ್ತಿಕೆ, ತೀರ್ಥಗಳನ್ನು ಅಯೋದ್ಯೆಗೆ ಕಳುಹಿಸಿಕೊಡಲಾಗುತ್ತಿದೆ ಎಂದರು.

ಆ.5ರಂದು ಕರಸೇವಕರಿಗೆ ಅಭಿನಂದನೆ:

ಆ.5ರಂದು ಸಂಜೆ 4 ಗಂಟೆಗೆ ಕನ್ನಡ ಜಾಗೃತ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, 1992ರ ರಾಮ ಜನ್ಮ ಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ತೆರಳಿದ್ದ ಕರಸೇವಕರಿಗೆ ಹಾಗೂ ಅಂದು ಹುತಾತ್ಮರಾದ ಸತೀಶ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕಾರ್ಯಕರ್ತರ ಸಮ್ಮುಖದಲ್ಲಿ ನೆರವೇರಿಸಲಾಗುವುದು ಎಂದು ತಿಳಿಸಿದರು.

ವಿಶ್ವ ಹಿಂದು ಪರಿಷತ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ದೀಪಕ್ ಜೈನ್, ಭಜರಂಗ ದಳದ ಜಿಲ್ಲಾ ಸಂಚಾಲಕ ಮಧು ಬೇಗಲಿ, ತಾಲೂಕು ಸಂಚಾಲಕ ಭಾಸ್ಕರ್ ಭಗತ್, ಸಹ ಸಂಚಾಲಕ ಅರ್ಜುನ್ ವಿರಾಟ್ ಹಾಜರಿದ್ದರು.

ರಾಜಕೀಯ

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ,

[ccc_my_favorite_select_button post_id="118247"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!