ಬೆಂಗಳೂರು: ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಅವರು ಮಂಗಳವಾರ ನಿಧನರಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯನಾರಾಯಣ ಕೆಲ ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣ ಹಾಗೂ ಮಾದ್ಯಮಗಳಲ್ಲಿ ಸುದ್ದಿ ಹರಿದಾಡಿತ್ತು.
ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಶಾಸಕರ ಅಳಿಯ ರಾಘವೇಂದ್ರ ಅವರು, ಸತ್ಯನಾರಾಯಣ್ಗೆ ಇನ್ನೂ ಚಿಕಿತ್ಸೆ ನೀಡಲಾಗ್ತಿದೆ.ಅವರು ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು, ವೆಂಟಿಲೇಟರ್ನಲ್ಲಿದ್ದಾರೆ. ಸದ್ಯ ಅವರ ಸಾವಿನ ಕುರಿತ ವರದಿಗಳು ಸುಳ್ಳು’ ಎಂದು ಸ್ಪಷ್ಟಪಡಿಸಿದ್ದಾರೆ.
ಆದರೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಹಲವು ಸಚಿವರು ಸಂತಾಪ ಸಂದೇಶಗಳನ್ನು ಸೂಚಿಸಿರುವುದು, ಸತ್ಯನಾರಾಯಣ ಅವರ ಸಾವಿನ ಗೊಂದಲ ಮುಂದುವರೆದಿದೆ