ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 04 ರಂದು) 82 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯ ಅನ್ವಯ,ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 2, ಹೊಸಕೋಟೆ ತಾಲ್ಲೂಕಿನಲ್ಲಿ 10, ದೇವನಹಳ್ಳಿ ತಾಲ್ಲೂಕಿನಲ್ಲಿ 25 ಹಾಗೂ ಬೆಂಗಳೂರು ನಗರ ಮತ್ತು ಇತರೆ ಜಿಲ್ಲೆಗಳ 24 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತ ವರದಿ,ಜಿಲ್ಲಾಡಳಿತ ವರದಿ ನಡುವೆ ಗೊಂದಲ ಮುಂದುವರೆದ ಕಾರಣ.ಜಿಲ್ಲಾಡಳಿತ ನೀಡಿರುವ ದೊಡ್ಡಬಳ್ಳಾಪುರದ ವರದಿಯ ಹರಿತಲೇಖನಿ ಪ್ರಕಟಿಸುತ್ತಿಲ್ಲ.