ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ(67) ಮಂಗಳವಾರ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯನಾರಾಯಣ,ಇಂದು 12.30ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಅಮ್ಮಾಜಮ್ಮ, ಪುತ್ರ ಎಸ್.ಪ್ರಕಾಶ್ ಹಾಗೂ 4 ಹೆಣ್ಣುಮಕ್ಕಳು ಹಾಗು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆಂದು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ.