ಸಾಮಾಜಿಕ ಅಂತರದೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಲು ಕ್ರಮ ‌ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ

ದೊಡ್ಡಬಳ್ಳಾಪುರ: 74 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 15 ರಂದು ದೇವನಹಳ್ಳಿ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಜರ್, ಮಾಸ್ಕುಗಳ ಬಳಕೆ ನಿಯಮದೊಂದಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಸಂಬಂಧಿಸಿದ ಇಲಾಖೆಗಳಿಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಬಾಂಗಣದಲ್ಲಿ ಇಂದು ನಡೆದ “74 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಸಭೆಯ” ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕರೊನಾ ವೈರಾಣು ಸೋಂಕು ನಿಯಂತ್ರಣಕ್ಕೆ ಕಳೆದ ನಾಲ್ಕು ತಿಂಗಳುಗಳಿಂದ ಶ್ರಮಿಸುತ್ತಿರುವ ವೈದ್ಯರು, ನರ್ಸ್‌ಗಳು, ಆರೋಗ್ಯ ಇಲಾಖೆ ಸಹಾಯಕ ಸಿಬ್ಬಂದಿ, ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿ ಸೇರಿದಂತೆ ಮೊದಲಾದ ಕರೊನಾ ವಾರಿಯರ್ಸ್‌ಗಳನ್ನು ಗುರುತಿಸಿ ಗೌರವಿಸಲಾಗುವುದೆಂದು ಅವರು ಹೇಳಿದರು.

ದೇಶದಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆ ಪ್ರಸಕ್ತ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತು ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ಕೆಲವು ಮಾರ್ಗಸೂಚಿಗಳನ್ನು ನೀಡಿದ್ದು, ಅದರನ್ವಯ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ, ಭಾಷಣ, ಪರೇಡ್ ಮತ್ತಿತರ ವಿಧಾಯಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರಲ್ಲದೆ, ಸಾಮಾಜಿಕ ಅಂತರ ಕಾಯ್ದಯಕೊಳ್ಳಬೇಕಾಗಿರುವುದರಿಂದ ಈ ಬಾರಿಯ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ಮಕ್ಕಳು ಭಾಗವಹಿಸುವುದಿಲ್ಲ. ಆಯ್ದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆ, ವೈದ್ಯರು, ನರ್ಸ್‌ಗಳು, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಮತ್ತಿತರ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಆಯ್ದ ಕರೊನಾ ವಾರಿಯರ್ಸ್‌ಗಳನ್ನು ಸಾಂಕೇತಿಕವಾಗಿ ಸನ್ಮಾನಿಸಿ ಗೌರವಿಸಲಾಗುವುದು.ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 7:30ಕ್ಕೆ ಧ್ವಜಾರೋಹಣ ನೆರವೇರಿಸಿ, 8:30ಕ್ಕೆ ದೇವನಹಳ್ಳಿ ಕ್ರೀಡಾಂಗಣದಲ್ಲಿ ಸಮಾವೇಶಗೊಳ್ಳಬೇಕು. 9.00 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಪೊಲೀಸ್, ಗೃಹ ರಕ್ಷಕದಳ, ಅರಣ್ಯ ಹಾಗೂ  ಅಗ್ನಿಶಾಮಕ  ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಮಾತ್ರ ಪಥಸಂಚಲನ ನಡೆಯಲಿದೆ. ಶಾಲಾ-ಕಾಲೇಜುಗಳು ರಜೆ ಇರುವುದರಿಂದ ಈ ಬಾರಿ ವಿದ್ಯಾರ್ಥಿಗಳ ತಂಡದ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮೊಟಕುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ  ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡುವಂತೆ ಆರೋಗ್ಯ ಇಲಾಖೆಗೆ ತಿಳಿಸಿದರಲ್ಲದೆ,ಯಾವುದೇ ಲೋಪದೋಷಗಳಿಲ್ಲದೆ, ಶಿಷ್ಠಾಚಾರದಂತೆ ಜಿಲ್ಲೆಯ ಗಣ್ಯ ವ್ಯಕ್ತಿಗಳನ್ನು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕೆಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯುವ ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಚಾರ ದಟ್ಟಣೆಯಾಗದಂತೆ ಹಾಗೂ ಸೂಕ್ತ ಬಿಗಿಬಂದೋಬಸ್ತ್ ಕೈಗೊಳ್ಳುವಂತೆ ಸಂಚಾರಿ ಪೊಲೀಸರಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಕ್ರೀಡಾಂಗಣದಲ್ಲಿ ಸ್ವಚ್ಛತೆ ಕಾಪಾಡುವಂತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ, ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಪುರಸಭೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ನಿಸರ್ಗ ನಾರಾಯಣಸ್ವಾಮಿ. ಎಲ್.ಎನ್., ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!